Ad Widget .

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ?

Ad Widget . Ad Widget .

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.

Ad Widget . Ad Widget .

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ಜೂ.14 ರ ಬೆಳಿಗ್ಗೆ 6 ಗಂಟೆಯಿಂದ ಜೂ.21 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಅಗತ್ಯ ಅಂಗಡಿಗಳನ್ನು ತೆರೆಯುವ ಸಮಯವನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತರಿಸಿ ಅವಕಾಶ ನೀಡಲಾಗಿದೆ.

ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
•ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
ಕೋವಿಡ್ ಕರ್ಫ್ಯೂ ಪ್ರತಿದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Leave a Comment

Your email address will not be published. Required fields are marked *