Ad Widget .

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ.

Ad Widget . Ad Widget .

ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ.

Ad Widget . Ad Widget .

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸಾಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು. ಅದನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *