Ad Widget .

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ: ಜೂನ್ 14 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಮಾವೇಶವೊಂದರಲ್ಲಿ ಭಾಷಣ ಮಾಡಲಿದ್ದಾರೆ. ವರ್ಚುವಲ್ ವೇದಿಕೆ ಮೂಲಕ ಮುಂದಿನ ಸೋಮವಾರ ವಿಶ್ವಸಂಸ್ಥೆ ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಛೇರಿ ಮೂಲಗಳು ತಿಳಿಸಿವೆ.

Ad Widget . Ad Widget .

ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಅದಲ್ಲದೆ ಪ್ರಧಾನಿ ಮೋದಿ ಅವರು ‘ಮರುಭೂಮೀಕರಣ ವಿರುದ್ಧ ಹೋರಾಟದ ವಿಶ್ವಸಂಸ್ಥೆಯ ಸಮಾವೇಶ’ದ (ಯುಎನ್‌ಸಿಸಿಡಿ) 14ನೇ ಅಧಿವೇಶನದ ಅಧ್ಯಕ್ಷರಾಗಿದ್ದಾರೆ. ಈ ಅಧಿವೇಶನಕ್ಕೆ ಮೋದಿ ಅವರು 2019ರ ಸೆಪ್ಟೆಂಬರ್‌ನಲ್ಲಿ ಚಾಲನೆ ನೀಡಿದ್ದರು.

Ad Widget . Ad Widget .

Leave a Comment

Your email address will not be published. Required fields are marked *