ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ವಾರದ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಕೆವಿ ಹೇಳಿದ್ದಾರೆ.

Ad Widget ... ..

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಿಂದೆ ಇದ್ದ ಲಾಕ್ಡೌನ್ ನಿಯಮಗಳನ್ನು ಜೂನ್ 21 ರವರೆಗೆ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂದಿನಂತೆಯೇ ವಾರದ ಎಲ್ಲಾ ದಿನ ನಿರ್ಬಂಧಗಳು ಮುಂದುವರೆಯಲಿದೆ. ಪ್ರತ್ಯೇಕವಾಗಿ ಈ ವಾರದ ಶನಿವಾರ ಮತ್ತು ಆದಿತ್ಯವಾರ (ಜೂ. 13 ಮತ್ತು 14) ದಂದು ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ವಾಹನ ಶೋ ರೂಂಗಳು, ಗ್ಯಾರೇಜುಗಳು ಮತ್ತು ಅಧಿಕೃತ ವಾಹನ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಅನುಮತಿ ಇದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *