Ad Widget .

ಜೂ.14 ರಿಂದ 21 ರವರೆಗೆ ದ.ಕ ಜಿಲ್ಲೆಯ 17 ಗ್ರಾ.ಪಂ ಸೀಲ್ ಡೌನ್

ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ. ಅದಲ್ಲದೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳು ಸೀಲ್‌ಡೌನ್ ಆಗಲಿದೆ.

Ad Widget . Ad Widget .

Leave a Comment

Your email address will not be published. Required fields are marked *