Ad Widget .

ಸಂಪೂರ್ಣ ಸೀಲ್ ಡೌನ್ ಆದ ದ.ಕ ಜಿಲ್ಲೆಯ 17 ಗ್ರಾಮಗಳಲ್ಲಿ ಏನೇನಿರುತ್ತೆ ಗೊತ್ತಾ?

ಮಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಗೊಳಿಸಲು ದ.ಕ ಜಿಲ್ಲೆಯ 17 ಗ್ರಾಮಗಳನ್ನು ಜೂನ್ 14 ರಿಂದ ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, ಈ ಗ್ರಾಮ ಪಂಚಾಯತ್ ಗಳಲ್ಲಿ ಕೆಲವು ಸೂಚಿತ ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ. ಉಳಿದಂತೆ ಗ್ರಾಮಕ್ಕೆ ಒಳಪ್ರವೇಶ ಹಾಗೂ ನಿರ್ಗಮನಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗುವುದು. ಸೀಲ್‌ ಡೌನ್ ಮಾಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅವಶ್ಯಕತೆಯನ್ನು ಆಧರಿಸಿ ಪಾವತಿ ಆಧಾರದ ಮೇಲೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕ್ರಮವಹಿಸಬೇಕು. ಈ ಗ್ರಾಮ
ಪಂಚಾಯತ್ ವ್ಯಾಪ್ತಿಗಳಲ್ಲಿ ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು , ಕ್ಲಿನಿಕ್ಸ್ , ಕ್ಲಿನಿಕಲ್ ಲ್ಯಾಬ್, ಟೆಲಿಮೆಡಿಸಿನ್ ಸೌಲಭ್ಯಗಳು ,ಔಷಧಾಲಯಗಳು,ಜನ ಔಷಧಿ ಕೇಂದ್ರಗಳು , ರಕ್ತ ಸಂಗ್ರಹ ಕೇಂದ್ರಗಳು, ಕೆಎಂಎಫ್ ಹಾಲಿನ ಬೂತು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸೀಮಿತ ಅವಧಿಗೆ ಹಾಲಿನ ಸಂಗ್ರಹಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಪೆಟ್ರೋಲ್ ಬಂಕ್ ಗಳು ಇದ್ದಲ್ಲಿ ಅವುಗಳ ಕಾರ್ಯಾಚರಣೆಗೆ ಅನುಮತಿಸಿದೆ. ಅಗತ್ಯ ತುರ್ತು ವೈದ್ಯಕೀಯ ಸೇವೆಯ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿಯವರ ಆದೇಶದಲ್ಲಿ ತಿಳಿಸಲಾಗಿದೆ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ 50 ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳು ವರದಿಯಾಗಿರುವ ಗ್ರಾಮಗಳಲ್ಲಿ ಸಂಪೂರ್ಣ 7 ದಿನಗಳು ಸೀಲ್‌ ಡೌನ್ ಮಾಡಲು ಆದೇಶಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *