Ad Widget .

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

Ad Widget . Ad Widget .

ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ಸಂಚಾರಿ ವಿಜಯ್‌ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದ್ದು ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. ೩೬ ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟ ಎಂಬುದಾಗಿ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಹೇಳಿದ್ದಾರೆ.

ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ‘ನಾನು ಅವನಲ್ಲ… ಅವಳು‘  ಚಿತ್ರ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‌ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು.
ಸದ್ಯ ನಟನ ನಿಧನಕ್ಕೆ ಚಿತ್ರರಂಗ ಸೇರಿದಂತೆ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.

Leave a Comment

Your email address will not be published. Required fields are marked *