Ad Widget .

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾದೆ.

Ad Widget . Ad Widget .

ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪ. ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.
ಒಂದು ವೇಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸುತ್ತಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.

Ad Widget . Ad Widget .

ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿರೋಡು ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು, ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ. ಅವಾಗಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದಾನೆ. ಈತನ ಹಿಂಸೆ ತಡೆಯಲಾಗದೆ ಮನೆಯವರಿಗೆ ತಿಳಿಸಿ ಯುವತಿ ಠಾಣೆಗೆ ದೂರು ನೀಡಿದ್ದಾಳೆ.
ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *