Ad Widget .

ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ: ಒಂದೇ ಕುಟುಂಬದ 10 ಜನ ಸಾವು

ಅಹ್ಮದಾಬಾದ್: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಎಲ್ಲಾ 10 ಮಂದಿ ದುರ್ಮರಣಕ್ಕಿಡಾದ ಘಟನೆ ಜಿಲ್ಲೆಯ ತಾರಪುರ ಎಂಬಲ್ಲಿ ನಡೆದಿದೆ.

Ad Widget . Ad Widget .

ತಾರಾಪುರ-ವಾಟಾಮನ್​ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 10 ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಮಕ್ಕಳೂ ಇದ್ದರು. ವೇಗವಾಗಿ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತ ದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದರಿಂದ ಶವ ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ತಾರಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *