Ad Widget .

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ

ವಿಶಾಖಪಟ್ಟಣ: ಜಿಲ್ಲೆಯ ಬೇಗಲಾಮೆಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಜನ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.

Ad Widget . Ad Widget .

ಇಂದು ಬೆಳಿಗ್ಗೆ ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ನಕ್ಸಲ್ ನಿಗ್ರಹ ಪಡೆ ಶೋಧ ಕಾರ್ಯ ಆರಂಭಿಸಿತ್ತು. ಅರಣ್ಯ ಪ್ರದೇಶದಲ್ಲಿ ನಕ್ಸಲರ ಪತ್ತೆಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆದಿದೆ. ಹತ್ಯೆಯಾದವರಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ ಹಿರಿಯ ನಾಯಕ ಮತ್ತು ಮಹಿಳಾ ಸದಸ್ಯೆ ಸೇರಿದ್ದಾರೆ. ಸ್ಥಳದಿಂದ ಮದ್ದುಗುಂಡುಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲರ ತಂಡದಲ್ಲಿ ಉಳಿದವರು ಕಾಡಿನೊಳಗೆ ಪರಾರಿಯಾಗಿದ್ದಾರೆ. ತಪ್ಪಿಸಿಕೊಂಡವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Ad Widget . Ad Widget .

Leave a Comment

Your email address will not be published. Required fields are marked *