Ad Widget .

ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಕಾಂಗ್ರೆಸ್ ನ ನಾಯಕರ ನಡುವೆ ಮಾರಾಮಾರಿ ನಡೆದ ಘಟನೆ ನಿನ್ನೆ ಮದ್ಯಾಹ್ನ ನಡೆದಿದೆ. ಘಟನೆ ಬಳಿಕ ಒಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

ನಗರದ ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಭೆ ನಿನ್ನೆ ನಡೆದಿತ್ತು. ಸಭೆ ಮುಗಿದ ಬಳಿಕ ನಾಯಕರ ನಡುವೆಯೇ ಹೊಡೆದಾಟ ನಡೆದಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಜೊತೆ ಆಗಮಿಸಿದ್ದ ತರೀಕೆರೆ ಐಟಿಸೆಲ್ ಅಧ್ಯಕ್ಷ ದರ್ಶನ್ ಎಂಬವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಯಲ್ ಶರೀಫ್ ಎಂಬವರು ಬೆಂಬಲಿಗರೊಂದಿಗೆ ಸೇರಿಕೊಂಡು ಥಳಿಸಿದ್ದಾರೆ ಎನ್ನಲಾಗಿದೆ. ವಾಟ್ಸಾಪ್ ಗ್ರೂಪ್ ನಲ್ಲಿ ನಡೆದ ಚರ್ಚೆ ವಿಚಾರದಲ್ಲಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ದರ್ಶನ್ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಗಲಾಟೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಕರ್ತರನ್ನು ಓಡಿಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *