ಶಿವಮೊಗ್ಗ: ಪಂಪ್ ಸೆಟ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಯುವಕರಿಬ್ಬರು ಸಾವಿಗೀಡಾಗಿದ್ದಾರೆ.
ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಹಾರೋಗೊಪ್ಪ ಬಿ ಕ್ಯಾಂಪ್ ನಿವಾಸಿಗಳಾದ ಶಶಿಕುಮಾರ್ ನಾಯ್ಕ (32) ಮತ್ತು ಶೇಖರ ನಾಯ್ಕ (36) ಮೃತ ದುರ್ದೈವಿಗಳು. ಇವರಿಬ್ಬರು ಜಮೀನಿನಲ್ಲಿ ಬೋರ್ವೇಲ್ ಗೆ ಅಳವಡಿಸದ್ದ ಪಂಪ್ ಸೆಟ್ ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ದುರ್ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.