ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್
ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ ಎಂದಿದ್ದಾರೆ. ಹಾಗೇ ಯಡಿಯೂರಪ್ಪ ಮಾಡಿದ ಕೆಲಸಗಳ ಬಗ್ಗೆ ಗೌರವ ಇದೆ. ಅಲ್ಲದೆ ಬಿಜೆಪಿಯಲ್ಲಿ ಆಗುತ್ತಿರುವ ಬದಲಾವಣೆಗೆ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ.
ಇದೇ ವೇಳೆ ‘ ನಾನು ಅರುಣ್ ಸಿಂಗ್ ಭೇಟಿ ಮಾಡಿದೆ. ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ವಸ್ತುಸ್ಥಿತಿ ಹೇಳಿದ್ದೇನೆ. ನಮಗೆ ಮಂತ್ರಿಗಿರಿ ಸಿಕ್ಕಿಲ್ಲ ಅನ್ನೋ ಬೇಸರವಿಲ್ಲ. ಈ ಬಗ್ಗೆ ನಾನು ದೂರುತ್ತಿಲ್ಲ. ಅರುಣ್ ಸಿಂಗ್ ಅವರಿಗೆ ಪಕ್ಷದ ವಸ್ತುಸ್ಥಿತಿಯನ್ನು ಆಳವಾಗಿ ತಿಳಿಸಿದ್ದೇನೆ. ನಾನು ಯಾರ ಬಣವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ’ ಎಂದರು.
ತನ್ನದೇ ಪಕ್ಷದ ವಿಷಯವನ್ನು ಮುಂದುವರೆಸಿ ಮಾತನಾಡಿದ ಅವರು ‘ನಾನು ಪ್ರಧಾನಿಗಳ ಜತೆ ನೇರ ಸಂಪರ್ಕ ಇಟ್ಕೊಂಡಿದ್ದೇನೆ. ಜೆಡಿಎಸ್ ನಲ್ಲಿ ರಾಜೀನಾಮೆ ಕೊಟ್ಟು, ಹಲವು ವಿಚಾರ ವಿರೋಧ ಮಾಡಿ ಬಂದೆವು. ಬಿಜೆಪಿಯಲ್ಲೂ ಅವೇ ವಿಚಾರಗಳಿವೆ. ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ. ರಾಕ್ಷಸ ರಾಜಕಾರಣ ಇಲ್ಲೂ ಕಾಣ್ತಿದ್ದೇವೆ. ಯಡಿಯೂರಪ್ಪ ಮಾಡಿದ ಕೆಲಸಗಳ ಬಗ್ಗೆ ಗೌರವ ಇದೆ. ಆದರೂ ಇವತ್ತಿನ ಪ್ರಶ್ನೆ ಯಡಿಯೂರಪ್ಪ ಬಗ್ಗೆ ಅಲ್ಲ’ ಎಂದರು.
ಹೈಕಮಾಂಡ್ `ಎಸ್’ ಅಂದ್ರೆ ರಾಜೀನಾಮೆಗೆ ಸಿದ್ಧ ಅಂತ ಖುದ್ದು ಬಿಎಸ್‌ವೈ ಅವರೇ ಹೇಳಿದ್ದಾರೆ. ಆ ಪ್ರಕಾರವಾಗಿ ಅವರು ಪಕ್ಷದಲ್ಲಿ ಮಾರ್ಗದರ್ಶಕರಾಗಿ ಮುಂದುವರಿಯಲಿ.
ಪಂಚಮಸಾಲಿಯಲ್ಲಿ ನಿರಾಣಿ, ಯತ್ನಾಳ್, ಬೆಲ್ಲದ್ ಇದ್ದಾರೆ. ಯಂಗ್ ಸ್ಟಾರ್ ಬೇಕಾದರೆ ಬೆಲ್ಲದ್ ಅವರನ್ನು ಮಾಡಿ. ಮಧ್ಯ ವಯಸ್ಕ ಬೇಕಾದರೆ ನಿರಾಣಿಯವರನ್ನ ಮಾಡಿ. ಎಲ್ಲದಕ್ಕೂ ಬೇಕು ಅಂದ್ರೆ ಯತ್ನಾಳ್ ಅವರನ್ನ ಮಾಡಿ ಎಂದು ತಿಳಿಸಿದ್ದು ಮತ್ತೆ ಬಿಜೆಪಿಯ ಕಿವಿಹಿಂಡಿದ್ದಾರೆ.


















