Ad Widget .

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ.

Ad Widget . Ad Widget .

ಈತನಿಗೆ ಫೇಸ್‌ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು.
ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸಪ್ ಮೂಲಕ ಕಳುಹಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದು ಹೇಳಿ ವಿಶ್ವಾಸ ಗಿಟ್ಟಿಸಿಕೊಂಡಿದ್ದ.

Ad Widget . Ad Widget .

ಸೋಮವಾರ ಅಹಮದ್ ಪಾಷಾ ನಿನಗೆ ಕೆಲಸ ಕೊಡಿಸುತ್ತೇನೆ. ಮಾತನಾಡಬೇಕಿದೆ ನನ್ನ ಮನೆಗೆ ಬಾ ಎಂದು ತನ್ನ ಚಾಲಕನ ಮೂಲಕ ಓಲಾಕ್ಯಾಬ್ ಬುಕ್ ಮಾಡಿಸಿ ಶಾನಭೋಗನಹಳ್ಳಿಯ ತನ್ನ ಮನೆಗೆ ಯುವತಿಯನ್ನು ಕರೆಸಿಕೊಂಡಿದ್ದ. ಮನೆಗೆ ಬಂದ ಯುವತಿ ಮೇಲೆ ಅಹಮದ್ ಪಾಷಾ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದಕ್ಕೆ ವಿರೋಧಿಸಿದ ಯುವತಿಗೆ ಗನ್ ತೋರಿಸಿ ಬೆದರಿಸಿದ್ದಾನೆ. ಅಲ್ಲದೆ, ಆಕೆಯ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಹೆದರಿಸಿದ್ದಾನೆ ಎಂದು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಅಹಮದ್ ಪಾಷ, ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ತಲೆಮರೆಸಿಕೊಂಡಿರುವ ಅಹಮದ್ ಪಾಷಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *