ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ.

Ad Widget ... ..

ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿತ್ತು. ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಲಾರಿ, ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *