ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಶೇಕಡ 5 ಕ್ಕಿಂತ ಕೆಳಕ್ಕೆ ಇಳಿಯದ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನುಳಿದಂತೆ ಪಾಸಿಟಿವಿಟಿ ದರ ಇಳಿಕೆ ಕಂಡಿರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಪಾಸಿಟಿವಿಟಿ ದರದ ಆಧಾರದ ಮೇಲೆ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 16 ಜಿಲ್ಲೆಗಳಲ್ಲಿ, ಈ ಕೆಳಕಂಡಂತೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶನೀಡಲಾಗಿದೆ. ಎಸಿ ಚಾಲನೆಗೊಳಿಸದೇ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಮಧ್ಯಪಾನಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಶೇ.50ರಷ್ಟು ಜನರಿಗೆ ಅವಕಾಶ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ. ಬಸ್ ಮತ್ತು ಮೆಟ್ರೋಗೆ ಶೇ.50ರಷ್ಟು ಜನರೊಂದಿಗೆ ಕಾರ್ಯಾಚರಣೆಗೆ ಅವಕಾಶ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಲಾಡ್ಜ್, ರೆಸಾರ್ಟ್ ಶೇ.50ರಷ್ಟು ಜನರೊಂದಿಗೆ ಅವಕಾಶ. ಜಿಮ್ ಗಳಲ್ಲಿ ಹವಾನಿಯಂತ್ರಣ ಇಲ್ಲದೇ ಅವಕಾಶ ಕೊಡಲಾಗಿದೆ.
ಇನ್ನು ಶೇ.5ಕ್ಕಿಂತ ಹೆಚ್ಚು ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 11-06-2021ರ ಆದೇಶವೇ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.