Ad Widget .

ನಿಧಿಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದರು | ಅರ್ಚಕ, ಜ್ಯೋತಿಷಿ, ಸರ್ಕಾರಿ ಉದ್ಯೋಗಿ ಸಹಿತ ಏಳು ಜನರ ಬಂಧನ

ಹಾಸನ: ನಿಧಿ ಸಿಗುತ್ತದೆ ಎಂಬ ಆಸೆಯಿಂದ ದೇವಾಲಯವನ್ನೇ ಅಗೆದ ಅರ್ಚಕ, ಜ್ಯೋತಿಷ್ಯ ಮತ್ತು ಸರ್ಕಾರಿ ನೌಕರ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಆಲೂರು ತಾಲ್ಲೂಕಿನ ದೈತಾಪುರ ಹೊರವಲಯದ ಪಾರ್ವತಮ್ಮನ ಬೆಟ್ಟದ ಮೇಲಿರುವ ಪುರಾತನ ದೇವಾಲಯದಲ್ಲಿ ಈ ಘಟನೆ ನಡೆದಿದೆ.

Ad Widget . Ad Widget .

ಈ ಆರೋಪದ ಮೇಲೆ ಹಾಸನ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ, ಗಣಪತಿ ದೇವಾಲಯದ ಅರ್ಚಕ ತಿಪ್ಪೇಸ್ವಾಮಿ, ಜೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ತಾಲ್ಲೂಕಿನ ಜಯರಾಮ, ಚೇತನ್, ಮಂಜುನಾಥ, ಹಾಸನ ತಾಲ್ಲೂಕಿನ ಶಂಕರನಹಳ್ಳಿ ಗ್ರಾಮದ ಕುಮಾರ ಬಂಧಿತಸಲಾಗಿದೆ.

Ad Widget . Ad Widget .

ಆರೋಪಿಗಳು ಸ್ಥಳದಲ್ಲಿ ಹೋಮ, ಪೂಜೆ ನಡೆಸಿ ಸುತ್ತಲು ಅರಿಸಿನ-ಕುಂಕುಮ ಎರಚಿ ನಿಧಿ ಶೋಧ ಆರಂಭಿಸಿದ್ದಾರೆ. ಪುರಾತನ ದೇವಾಲಯ ಆಗಿರುವುದರಿಂದ ಅಪಾರ ಪ್ರಮಾಣದಲ್ಲಿ ಚಿನ್ನ ಸಿಗಬಹುದೆಂಬ ಆಸೆಯಿಂದ ದುಷ್ಕರ್ಮಿಗಳು ಗರ್ಭಗುಡಿ ಯಲ್ಲಿ 10 ಅಡಿಗೂ ಹೆಚ್ಚು ಆಳದ ಗುಂಡಿ ತೋಡಿ ಹುಡುಕಾಟ ನಡೆಸಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಶುಕ್ರವಾರ ದೇವಾಲಯದಲ್ಲಿ ಪೂಜೆ ನಡೆಸಲಾಗುತ್ತಿತ್ತು. ಅದರಂತೆ ಶುಕ್ರವಾರ ಮಂಜಾನೆ ದೇವಾಲಯಕ್ಕೆ ಪೂಜೆಗೆಂದು ಅರ್ಚಕರು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಆಲೂರು ಪೊಲೀಸರಿಗೆ ದೂರು ನೀಡಲಾಗಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅನುಮಾನದಿಂದ ತಾಲ್ಲೂಕಿನ ಬೊಸ್ಮನಹಳ್ಳಿ ಗ್ರಾಮದ ಜೋತಿಷಿ ಮಂಜುನಾಥ್ ನನ್ನು ವಿಚಾರಿಸಿದಾಗ ನಿಧಿ ಶೋಧ ನಡೆಸಿದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅದೇ ದಿನ ಉಳಿದ ಆರು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳ ಬಂಧನವಾಗುವ ಸಾಧ್ಯತೆಯಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಎಂ.ದಿನೇಶ್‌ ಕುಮಾರ್‌ ಹೇಳಿದ್ದಾರೆ.ಹಾಸನ:ನಿಧಿ ಸಿಗುತ್ತದೆ ಎಂಬ ಆಸೆಯಿಂದ ದೇವಾಲಯವನ್ನೇ ಅಗೆದ ಅರ್ಚಕ, ಜ್ಯೋತಿಷ್ಯ ಮತ್ತು ಸರ್ಕಾರಿ ನೌಕರ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಆಲೂರು ತಾಲ್ಲೂಕಿನ ದೈತಾಪುರ ಹೊರವಲಯದ ಪಾರ್ವತಮ್ಮನ ಬೆಟ್ಟದ ಮೇಲಿರುವ ಪುರಾತನ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಈ ಆರೋಪದ ಮೇಲೆ ಹಾಸನ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ, ಗಣಪತಿ ದೇವಾಲಯದ ಅರ್ಚಕ ತಿಪ್ಪೇಸ್ವಾಮಿ, ಜೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ತಾಲ್ಲೂಕಿನ ಜಯರಾಮ, ಚೇತನ್, ಮಂಜುನಾಥ, ಹಾಸನ ತಾಲ್ಲೂಕಿನ ಶಂಕರನಹಳ್ಳಿ ಗ್ರಾಮದ ಕುಮಾರ ಬಂಧಿತಸಲಾಗಿದೆ. ಆರೋಪಿಗಳು ಸ್ಥಳದಲ್ಲಿ ಹೋಮ, ಪೂಜೆ ನಡೆಸಿ ಸುತ್ತಲು ಅರಿಸಿನ-ಕುಂಕುಮ ಎರಚಿ ನಿಧಿ ಶೋಧ ಆರಂಭಿಸಿದ್ದಾರೆ. ಪುರಾತನ ದೇವಾಲಯ ಆಗಿರುವುದರಿಂದ ಅಪಾರ ಪ್ರಮಾಣದಲ್ಲಿ ಚಿನ್ನ ಸಿಗಬಹುದೆಂಬ ಆಸೆಯಿಂದ ದುಷ್ಕರ್ಮಿಗಳು ಗರ್ಭಗುಡಿ ಯಲ್ಲಿ 10 ಅಡಿಗೂ ಹೆಚ್ಚು ಆಳದ ಗುಂಡಿ ತೋಡಿ ಹುಡುಕಾಟ ನಡೆಸಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಶುಕ್ರವಾರ ದೇವಾಲಯದಲ್ಲಿ ಪೂಜೆ ನಡೆಸಲಾಗುತ್ತಿತ್ತು. ಅದರಂತೆ ಶುಕ್ರವಾರ ಮಂಜಾನೆ ದೇವಾಲಯಕ್ಕೆ ಪೂಜೆಗೆಂದು ಅರ್ಚಕರು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಆಲೂರು ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅನುಮಾನದಿಂದ ತಾಲ್ಲೂಕಿನ ಬೊಸ್ಮನಹಳ್ಳಿ ಗ್ರಾಮದ ಜೋತಿಷಿ ಮಂಜುನಾಥ್ ನನ್ನು ವಿಚಾರಿಸಿದಾಗ ನಿಧಿ ಶೋಧ ನಡೆಸಿದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅದೇ ದಿನ ಉಳಿದ ಆರು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳ ಬಂಧನವಾಗುವ ಸಾಧ್ಯತೆಯಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಎಂ.ದಿನೇಶ್‌ ಕುಮಾರ್‌ ಹೇಳಿದ್ದಾರೆ.

Leave a Comment

Your email address will not be published. Required fields are marked *