ಅಗತ್ಯ ವಸ್ತು ಖರೀದಿಗೆ ಮದ್ಯಾಹ್ನ 1 ರವರೆಗೆ ಅವಕಾಶ: ದಕ ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

. Ad Widget . Ad Widget . Ad Widget

ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಹೊರಡಿಸಿದೆ ಆದೇಶದಂತೆ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ.

. Ad Widget .

ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ ಸೋಮವಾರದಿಂದ ಯಾವುದಕ್ಕೆಲ್ಲಾ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಇನ್ನೊಂದು ವಾರದಲ್ಲಿ ಕಟ್ಟುನಿಟ್ಟಾಗಿ ಎಲ್ಲರೂ ಕೋವಿಡ್ ನಿಯಮ ಪಾಲಿಸಿದರೆ ಪಾಸಿಟಿವಿಟಿ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

Leave a Comment

Your email address will not be published. Required fields are marked *