Ad Widget .

ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ

ಬೆಂಗಳೂರು: ಆರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಇದೀಗ ಲೋಕಸಭೆ ಸಚಿವಾಲಯದ ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಸೇರ್ಪಡಿಸಿ ಆದೇಶ ಹೊರಡಿಸಿದೆ.

Ad Widget . Ad Widget .

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೇಶೀಯ ಮತ್ತು ವಿದೇಶಿ ಭಾಷೆಗಳನ್ನು ಕಲಿಸಲು ಜೂ.22ರಂದು ದೆಹಲಿಯಲ್ಲಿ ಪ್ರೈಡ್‌ ಕಲಿಕಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ತೆಲುಗು, ಬಂಗಾಳಿ, ಮರಾಠಿ, ತಮಿಳು ಸೇರಿದಂತೆ ಬಹುತೇಕ ಭಾಷೆಗಳನ್ನು ಸೇರ್ಪಡೆ ಮಾಡಿ ಕನ್ನಡವನ್ನು ನಿರ್ಲಕ್ಷ್ಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಲೋಕಸಭೆ ಕನ್ನಡ ಭಾಷೆಯನ್ನು ಸೇರ್ಪಡಿಸಿಕೊಂಡಿದೆ.

Ad Widget . Ad Widget .

ಲೋಕಸಭಾ ಸಚಿವಾಲಯದ ಪಾರ್ಲಿಮೆಂಟರಿ ರಿಸರ್ಚ್ ಆಯಂಡ್‌ ಟ್ರೈನಿಂಗ್‌ ಇನ್ಸ್‌ಟಿಟ್ಯೂಟ್‌ ಫಾರ್‌ ಡೆಮಾಕ್ರಸಿ (ಪ್ರೈಡ್‌) ಸಂಸ್ಥೆಯ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ಕನ್ನಡಾಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದಿದ್ದರು. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿ ಉಪರಾಷ್ಟ್ರಪತಿಗಳಿಗೆ ಈ ಬಗ್ಗೆ ಪತ್ರವನ್ನೂ ಬರೆದಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸಂಸದರೊಂದಿಗೆ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಕನ್ನಡ ಭಾಷೆಯನ್ನು ಸೇರ್ಪಡೆ ಮಾಡಿ ಸಚಿವಾಲಯವು ಆದೇಶ ಹೊರಡಿಸಿದೆ. ಕನ್ನಡ ಸೇರ್ಪಡೆಗೊಂಡ ಬಳಿಕ ಇದು ಸಾಧ್ಯವಾಗಿದ್ದು ಸಾಮಾನ್ಯ ಕನ್ನಡಿಗರಿಂದ. ನಮ್ಮ ಮನವಿ ಪುರಸ್ಕರಿಸಿದ ಸಚಿವಾಲಯಕ್ಕೆ ಧನ್ಯವಾದ ಎಂದಿದ್ದಾರೆ.

Leave a Comment

Your email address will not be published. Required fields are marked *