ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ತಲೆ ಕೂದಲು ತೆಗೆಸಿ ಹರಕೆಯನ್ನು ತೀರಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು, ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ.

Ad Widget ... ..

Ad Widget

ಅನ್‌ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್ ಎಂಬ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಏಪ್ರಿಲ್ ತಿಂಗಳಿನಲ್ಲಿ ರಿಷಬ್ ಶೆಟ್ಟಿಯವರು, ತಮ್ಮ ಮಗನ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ ಮಾಡಿಸುವ ಮೂಲಕ ಆಚರಿಸಿದ್ದರು.

Leave a Comment

Your email address will not be published. Required fields are marked *