Ad Widget .

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​ ಕರ್ಪ್ಯೂ ಕೂಡ ಜಾರಿಯಲ್ಲಿ ಇರಲಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಶನಿವಾರ ಅನ್​ಲಾಕ್​ 2.0 ಘೋಷಣೆ ಮಾಡಿದ ಮುಖ್ಯಮಂತ್ರಿಗಳು 13 ಜಿಲ್ಲೆಗಳಲ್ಲಿ ಸೋಂಕು ಇಳಿಕೆಯಾದ ಪರಿಣಾಮ ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಿ ಆದೇಶಿಸಿದ್ದರು.

Ad Widget . Ad Widget . Ad Widget .

ಈ ವೇಳೆ ಮೈಸೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾ., ದಾವಣಗೆರೆ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ವಿಜಯಪುರದಲ್ಲಿ ಎಂದಿನಂತೆ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದ್ದರು.

Leave a Comment

Your email address will not be published. Required fields are marked *