ಬೆಂಗಳೂರು: ಮೊದಲ ಹಂತದಲ್ಲಿ ಉನ್ನತ ಶಿಕ್ಷಣ ತರಗತಿಗಳನ್ನು ಆರಂಭಿಸಲಾಗುವುದು ಮತ್ತು ಶಾಲಾ ತರಗತಿಗಳನ್ನು ಸದ್ಯಕ್ಕೆ ಕರೆಯಲಾಗುವುದಿಲ್ಲ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಆರೋಗ್ಯ ಸಚಿವ ಸುಧಾಕರ್ ಮತ್ತು ತಜ್ಞರ ಸಮಿತಿ ಉಪಸ್ಥಿತಿಯಲ್ಲಿ ನಡೆದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರು ಗಳಿಗೆ ವ್ಯಾಕ್ಸಿನೇಷನ್ ಪೂರ್ಣಗೊಂಡ ಬಳಿಕ ಕಾಲೇಜು ಆರಂಭಿಸಲಾಗುವುದು.
ಪದವಿ, ಇಂಜಿನಿಯರಿಂಗ್, ಮೆಡಿಕಲ್ ಇತ್ಯಾದಿ ಕಾಲೇಜುಗಳನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕೊರೋನಾ ಎರಡನೆಯ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪರಿಣಾಮ ಇರುವುದರಿಂದ ಸದ್ಯಕ್ಕೆ ಶಾಲೆ ತೆರೆಯುವ ಬಗ್ಗೆ ಚಿಂತನೆ ನಡೆಸಿಲ್ಲ, ಇದು ಮಧ್ಯಂತರ ವರದಿಯಾಗಿದ್ದು ಅಂತಿಮವಲ್ಲ ಎಂದು ಸಿಎಂ ಹೇಳಿದ್ದಾರೆ.