Ad Widget .

ದ.ಕ. ಜಿಲ್ಲಾಡಳಿತದಿಂದ ಹೊಸ ಮಾರ್ಗಸೂಚಿ ಪ್ರಕಟ | ಬಸ್ ಸಂಚಾರಕ್ಕೆ ಅನುಮತಿ | 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರ ಬರುವಂತಿಲ್ಲ

ಮಂಗಳೂರು: ದ.ಕ. ಜಿಲ್ಲಾಡಳಿತವು ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ್ದು ಜಿಲ್ಲೆಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Ad Widget . Ad Widget .

ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಇಂದು ಬೆಳಿಗ್ಗೆ ತಿಳಿಸಿದ್ದರುರು. ಇದೀಗ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯಿಂದ ಶುಕ್ರವಾರದವರೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶೇಕಡಾ 50ಕ್ಕಿಂತ ಹೆಚ್ಚು ಜನರನ್ನು ಬಸ್ಸಿಗೆ ಹತ್ತಿಸುವಂತಿಲ್ಲ. ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 7:00 ವರೆಗೆ ವಾರಂತ್ಯ ಕಾರ್ಯಕ್ರಮ ಮುಂದುವರೆಯುತ್ತದೆ. ಧಾರ್ಮಿಕ ಕೇಂದ್ರಗಳನ್ನು ಸಾರ್ವಜನಿಕರಿಗೆ ತೆರೆಯುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.
ಇನ್ನು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರಬಾರದು ಎಂದು ಜಿಲ್ಲಾಧಿಕಾರಿ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *