ಮಂಗಳೂರು : ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು.
ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು.
ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿಗಳಾದ ರಂಜಿತ್ ಕುಮಾರ್ ಹಾಗೂ ನಟರಾಜ್ ಅವರ ನೇತೃತ್ವದಲ್ಲಿ ನಗರದಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿದರು. ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿದ್ದವರ ಮೇಲೆ ದಂಡ ಹಾಕಿದರೆ, ಕಾರುಗಳಲ್ಲಿ ನಿಷೇಧಿತ ಟಿಂಟ್‌ಗಳನ್ನು ಹಾಕಿದ್ದನ್ನು ಪೊಲೀಸರೇ ಸ್ವತಹ ತೆಗೆದು ದಂಡ ವಿಧಿಸಿದರು.