ಚಿಕ್ಕಮಗಳೂರು: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ.
ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ‘ಹಲವು ಬಾರಿ ಶಾಸಕರಾಗಿ, ಈಗ ಸಚಿವರಾಗಿದ್ರೂ ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ವೇ? ಇಷ್ಟು ಬಾರಿ ಶಾಸಕರಾಗಿದ್ದಾರೆ, ಅದನ್ನೂ ನಾನೇ ಹೇಳಿಕೊಡಬೇಕೇ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರರನ್ನು ಹೆಸರೆತ್ತದೆ ಪ್ರಶ್ನೆ ಮಾಡಿದ್ದಾರೆ.
‘ಒಂದೆರಡು ಬಾರಿಯಲ್ಲ ಹಲವು ಬಾರಿ ಕೇಳಿದ್ದೇನೆ. ಅವರು ನಮಗೆ ಬುದ್ಧಿ ಹೇಳಬೇಕಾದವರು. ಸರಕಾರ ಅವರಿಗೆ ಜನರ ದುಡ್ಡಲ್ಲಿ ಎಲ್ಲಾ ಅಧಿಕಾರಿಗಳನ್ನ ನೀಡಿದೆ. ಕೈಗೊಬ್ಬ , ಕಾಲಿಗೊಬ್ಬ ಪಿಎಗಳು ಇದ್ದಾರೆ. ಪಿಎಗಳ ಮೂಲಕ ಶಾಸಕರಿಗೆ ಪ್ರವಾಸದ ಕಾರ್ಯಕ್ರಮಗಳನ್ನು ತಿಳಿಸಲು ಆಗುವುದಿಲ್ಲವೇ?, ಎಂದು ಪ್ರಶ್ನಿಸಿದ್ದಾರೆ.
‘ನಿಮ್ಮ ತಿಂಗಳ ಪ್ರವಾಸದ ಕಾಪಿ ಹಾಕುವುದಿಲ್ಲವೇ?, ಕಾರ್ಯಕ್ರಮದ ಕಾಪಿಯನ್ನ ಶಾಸಕರಿಗೆ ಏಕೆ ಕಳಿಸಲ್ಲ? ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ.
‘ಅಧಿಕಾರಿಗಳ ಸಭೆಗಳಲ್ಲಿ ಭೋಜೇಗೌಡ ಇರುವುದಿಲ್ಲ. ಸಭೆಯಲ್ಲಿ ಶಾಸಕರು, ಸಂಸದರು ಕೂತಾಗ ನಮಗೆ ಬೇರೆಯವರು ಕೇಳುತ್ತಾರೆ. ನಾನೊಬ್ಬ ಜನಪ್ರತಿನಿಧಿಯಾಗಿ ಸಭೆಗೆ ಹೋಗಿಲ್ಲ ಅಂದರೆ ಜನ ಏನೆಂದು ಹೇಳುತ್ತಾರೆ?, ಪ್ರೊಟೋಕಾಲ್ ಏನ್ ಮೇಂಟೇನ್ ಮಾಡಿದ್ದೀರಾ ನೀವು?, ನಾನೂ ಶಾಸಕ ಅಲ್ವಾ. 6 ಜಿಲ್ಲೆ 39 ತಾಲೂಕಿನಲ್ಲಿ ನನಗೆ ಪ್ರೋಟೋಕಾಲ್ ಇದೆ. ಇದು ನನ್ನ ನೋಡೆಲ್ ಕ್ಷೇತ್ರ. ನಿಮ್ಮ ಗುಂಪುಗಾರಿಕೆ ಇದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ, ನನಗೆ ಅದು ಗೊತ್ತಿದೆ. ಆ ಶಾಸಕರು, ಈ ಶಾಸಕರನ್ನ ಕರೆಯಬಾರದು ಎಂಬ ಗುಂಪುಗಾರಿಕೆ ಬಿಟ್ಟು ಜಿಲ್ಲಾ ಸಚಿವರು ಬರುವಾಗ ಪ್ರೋಟೋಕಾಲ್ ಮೈಂಟೇನ್ ಮಾಡಿ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ.
ಕಚೇರಿ ಹೊರಗೆ ನೆಲದಲ್ಲಿ ಕುಳಿತಿದ್ದ ಭೋಜೇಗೌಡರನ್ನು ಸಮಾಧಾನಿಸಲು ಸ್ವತಃ ಜಿಲ್ಲಾಧಿಕಾರಿ ಬಂದಿದ್ದರು. ಅವರ ಮುಂದೆಯೇ ಭೋಜೇಗೌಡ, ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಸರಿ ಇದ್ದಾರೆ. ನಿಮ್ಮನ್ನು ಆಡಿಸುವ ಮಂದಿ ಸರಿ ಇಲ್ಲ ಎಂದು ಟೀಕಿಸಿದ್ದಾರೆ.
Pingback: ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ | ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ | ಕಿಡಿಕಾರಿದ ಭೋ