ಮಲ್ಕಿ: ಕಾರು ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ.
ಗಾಯಗೊಂಡವರನ್ನು ಮುಲ್ಕಿ ಠಾಣೆಯಲ್ಲಿ ಗೃಹರಕ್ಷಕ ದಳ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (27) ಎಂದು ತಿಳಿದುಬಂದಿದೆ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಇಂದು ಬೆಳಗಿನ ಜಾವ ಉಡುಪಿ ಕಡೆ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಮಂಗಳೂರು ಕಡೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಗೆ ಇವರ ಕಾರ್ ಡಿಕ್ಕಿ ಹೊಡೆದಿದೆ.

ತಲೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.