June 2021

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಲಾಡ್ಜ್ ಗಳಲ್ಲಿ ಮತ್ತು ನಗರದ ಕೆಲವು ಮನೆಗಳಲ್ಲಿ ಅವರು ವಾಸಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಲಂಕಾ ಪ್ರಜೆಗಳು ಕಳೆದ ಮಾರ್ಚ್ ತಿಂಗಳಿನಲ್ಲಿ ತಮಿಳುನಾಡಿನ ತೂತುಕುಡಿಗೆ ಆಗಮಿಸಿದ್ದರು. ಅಲ್ಲಿಂದ ಉದ್ಯೋಗಕ್ಕಾಗಿ ಕೆನಡಾಗೆ ಹೋಗುವವರಿದ್ದರು. ತಮಿಳುನಾಡಿನಲ್ಲಿ ಲಂಕನ್ನರಿಗೆ ಕೆನಡಾದಲ್ಲಿ ಕೆಲಸ ಕೊಡಿಸುವ ಏಜೆಂಟ್ ಳಿದ್ದರು. ಆ ಸಮಯದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ಇದ್ದುದರಿಂದ ಅವರಿಗೆ ಕೆನಡಾಗೆ […]

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಲಂಕಾ ಪ್ರಜೆಗಳ ಬಂಧನ Read More »

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ. Read More »

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ

ದೆಹಲಿ: ಸರಿಯಾದ ಯೋಜನೆಯಿಲ್ಲದ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ಕಾರಣವಗಬಹುದು ಎಂದು ತಜ್ಞರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಹಾಗು ಕೋವಿಡ್ ಸೊಂಕಿಗೊಳಗಾದವರಿಗೆ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಸಲಹೆ ನೀಡಿದೆ. ಸರಿಯಾದ ವೈಜ್ಞಾನಿಕ ರೀತಿ ಅನುಸರಿಸದೆ, ವಿವೇಚನಾ ರಹಿತವಾಗಿ ಮತ್ತು ಅಪೂರ್ಣವಾದ ಸಾಮೂಹಿಕ ಲಸಿಕೀಕರಣವು ರೂಪಾಂತರ ತಳಿಗಳ ಸೃಷ್ಟಿಗೆ ಪ್ರಚೋದನೆ ನೀಡುತ್ತದೆ ಎಂದು ತಜ್ಞ ವೈದ್ಯರ ಸಮಿತಿ ಪ್ರಧಾನಿಗೆ ಸಲ್ಲಿಸಿದ ವರದಿಯಲ್ಲಿ ಸ್ಪಷ್ಟಪಡಿಸಿದೆ. ಏಮ್ಸ್‌ನ ವೈದ್ಯರು, ಕೋವಿಡ್-19 ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು, ಸಾರ್ವಜನಿಕ ಆರೋಗ್ಯ

ಸೊಂಕಿತರಿಗೆ ಲಸಿಕೆಯ ಅಗತ್ಯವಿಲ್ಲ | ಅವೈಜ್ಞಾನಿಕ ಲಸಿಕೀಕರಣ ಹೊಸ ರೂಪಾಂತರಿ ತಳಿ ಸೃಷ್ಟಿಗೆ ದಾರಿ: ಕೇಂದ್ರಕ್ಕೆ ತಜ್ಞರ ಎಚ್ಚರಿಕೆ Read More »

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್.

ಬೆಂಗಳೂರು. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ 100 ನಾಟ್‌ಔಟ್ ಆಂದೋಲನದ ಭಾಗವಾಗಿ ಇಂದು ಬೆಂಗಳೂರಿನ ಶಿವಾನಂದ ವೃತ್ತ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇವಲ ವಾಹನ ಹೊಂದಿರುವವರಿಗೆ ಮಾತ್ರ ಹೊರೆಯಾಗುತ್ತಿಲ್ಲ. ಈ ದರ ಏರಿಕೆಯಿಂದ

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್. Read More »

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ

ಮಂಗಳೂರು: ಮಾರಕ ಕಪ್ಪು ಶಿಲೀಂದ್ರ ಸೊಂಕಿಗೆ ಜಿಲ್ಲೆಯಲ್ಲಿ ಮತ್ತೆರಡು ಸಾವು ಸಂಭವಿಸಿದ್ದು ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಮೃತಪಟ್ಟವರು ಮತ್ತು ಹೊಸದಾಗಿ ಸೋಂಕಿಗೊಳಗಾದ ವರು ಎಲ್ಲರೂ ಹೊರಜಿಲ್ಲೆಯವರಗಿದ್ದಾರೆ. ಪತ್ತೆಯಾದ ಮೂರು ಹೊಸ ಪ್ರಕರಣಗಳು ಉತ್ತರ ಕನ್ನಡ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗೆ ಸಂಬಂಧಿಸಿದ್ದಾಗಿವೆ. ಎಲ್ಲರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಈ ಹಿಂದೆ ಸೊಂಕಿಗೊಳಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ನಿನ್ನೆ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬರು ಚಿಕ್ಕಮಗಳೂರು ಮತ್ತು ಇನ್ನೊಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ.

ದ ಕ: ಕಪ್ಪು ಶಿಲೀಂದ್ರ ಕ್ಕೆ ಮತ್ತೆರಡು ಬಲಿ Read More »

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ: ಜೂನ್ 14 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಮಾವೇಶವೊಂದರಲ್ಲಿ ಭಾಷಣ ಮಾಡಲಿದ್ದಾರೆ. ವರ್ಚುವಲ್ ವೇದಿಕೆ ಮೂಲಕ ಮುಂದಿನ ಸೋಮವಾರ ವಿಶ್ವಸಂಸ್ಥೆ ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಛೇರಿ ಮೂಲಗಳು ತಿಳಿಸಿವೆ. ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಅದಲ್ಲದೆ ಪ್ರಧಾನಿ ಮೋದಿ

ಸೋಮವಾರ ವಿಶ್ವಸಂಸ್ಥೆ ವೇದಿಕೆಯಲ್ಲಿ ಮೋದಿ ಭಾಷಣ Read More »

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ

ಚಿತ್ರದುರ್ಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ಚುಕ್ಕಾಣಿ ಹಿಡಿದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ಹೊಸದುರ್ಗ ಬಿಜೆಪಿ ಶಾಸಕ ಅಭಿಪ್ರಾಯ ಪಟ್ಟಿದ್ದಾರೆ. ಯಡಿಯೂರಪ್ಪ ಅತ್ಯುತ್ತಮ ನಾಯಕ, ಶ್ರಮಿಕ ರಾಜಕಾರಣಿ. ಅವರಿಗೆ ಯಾವ ದುರದೃಷ್ಟ, ಗ್ರಹಚಾರ ಇದೆಯೋ ನಮಗೆ ತಿಳಿಯದು. ಅವರು ರಾಜ್ಯದ ಮುಖ್ಯಮಂತ್ರಿ ಯಾದಾಗಲೆಲ್ಲ ರಾಜ್ಯದಲ್ಲಿ ಸಂಕಷ್ಟ ಎದುರಾಗುತ್ತದೆ. ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಬೇಸರ ವ್ಯಕ್ತಪಡಿಸಿದರು. ಹೊಸದುರ್ಗ ನಗರದ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದ ಬಳಿಕ ಈ ಬಗ್ಗೆ

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ Read More »

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ Read More »

ಮನೆಯಿಂದ ಕೇವಲ 100 ಮೀ. ದೂರದಲ್ಲಿದ್ದಳು ಅಂದು ನಾಪತ್ತೆಯಾಗಿದ್ದ ಯುವತಿ | ಪ್ರೇಯಸಿಯ ಹತ್ತು ವರ್ಷಗಳಿಂದ ತನ್ನ ಮನೆಯಲ್ಲಿಯೇ ಕೂಡಿಹಾಕಿದ್ದನು ಭಗ್ನಪ್ರೇಮಿ

ಕೇರಳ: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮನೆಮಗಳು ಅಂದಿನಿಂದಲೂ ಇಂದಿನವರೆಗೆ ಮನೆಯ ಬಳಿಯೇ ಯಾರಿಗೂ ತೋಚದೆ ಇದ್ದಳೆಂದರೆ ಹೇಗಾಗಬೇಡ ಹೇಳಿ. ಇಂತಹದೊಂದು ಅಚ್ಚರಿಯ ಘಟನೆ ಪಕ್ಕದ ಕೇರಳ ರಾಜ್ಯದಲ್ಲಿ ನಡೆದಿದ್ದು ಎಲ್ಲರನ್ನು ನಿಬ್ಬೆರಾಗಗುವಂತೆ ಮಾಡಿದೆ. ಪಾಲಕ್ಕಾಡ್ ಜಿಲ್ಲೆಯ ಅರಿಯೂರ್ ಬಳಿಯ ಕರೈಕ್ಕಟ್ಟುಪರಂಬು ಎಂಬ ಪುಟ್ಟ ಗ್ರಾಮದಲ್ಲಿ ಯುವಕನೋರ್ವ ಕುಟುಂಬಸ್ಥರು, ನೆರೆಹೊರೆಯವರಿಗೆ ಒಂದು ಸಣ್ಣ ಸುಳಿವೂ ಸಿಗದಂತೆ ಬರೋಬ್ಬರಿ 10 ವರ್ಷಗಳ ಕಾಲ ತನ್ನ ಪ್ರೇಯಸಿಯನ್ನು ಮನೆಯಲ್ಲೇ ಕೂಡಿಹಾಕಿಕೊಂಡಿದ್ದ. ಈ ಗ್ರಾಮದಲ್ಲಿ ಮನೆಗಳ ಸಂಖ್ಯೆ ಬಹಳ ಕಡಿಮೆ ಇರುವುದರಿಂದ

ಮನೆಯಿಂದ ಕೇವಲ 100 ಮೀ. ದೂರದಲ್ಲಿದ್ದಳು ಅಂದು ನಾಪತ್ತೆಯಾಗಿದ್ದ ಯುವತಿ | ಪ್ರೇಯಸಿಯ ಹತ್ತು ವರ್ಷಗಳಿಂದ ತನ್ನ ಮನೆಯಲ್ಲಿಯೇ ಕೂಡಿಹಾಕಿದ್ದನು ಭಗ್ನಪ್ರೇಮಿ Read More »

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ Read More »