ಕುಂದಾಪುರ: ರೈಲಿನಡಿಗೆ ಬಿದ್ದು ಚಿರತೆ ಸಾವು
ಕುಂದಾಪುರ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ಸೇನಾಪುರ ಬಳಿಯ ಕುಂದಬಾರಂದಾಡಿ ಎಂಬಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಚಿರತೆ ರೈಲು ಹಳಿಯ ಮೇಲೆ ಸಂಚರಿಸುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸಾವನ್ನಪ್ಪಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಕುಂದಾಪುರ: ರೈಲಿನಡಿಗೆ ಬಿದ್ದು ಚಿರತೆ ಸಾವು Read More »