ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.!
ಬೆಂಗಳೂರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ರಹಸ್ಯ ಚರ್ಚೆ ನಡೆಸಿದ್ದು, ಹಲವು ಸಚಿವರು ಮನೆಗೆ ತೆರಳುವ ಸಾಧ್ಯತೆ ಇದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಅವರು ಸಮಾಲೋಚನೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟ ಪುನಾರಚನೆ, ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆ ಕುರಿತಾಗಿ ಚರ್ಚೆ ನಡೆದಿದೆ ಎಂದು […]