July 2021

ಮತ್ತೆ ಏರಿಕೆ ಕಾಣುತ್ತಿರುವ ಕೋವಿಡ್| ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಾದರೂ ಅಚ್ಚರಿಯಿಲ್ಲ- ಡಿ.ಸಿ ಎಚ್ಚರಿಕೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸೋಂಕು ಹೆಚ್ಚಾದಲ್ಲಿ ಮತ್ತೆ ಲಾಕ್‌ಡೌನ್ ಮಾಡಬೇಕಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತಾನಾಡಿರುವ ಅವರು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಒಂದು ವೇಳೆ ಸೋಂಕು ಹೆಚ್ಚದಲ್ಲಿ ಮತ್ತೆ ಲಾಕ್ಡೌನ್, ವೀಕೆಂಡ್ ಕರ್ಪ್ಯೂ ನಿಯಮಗಳನ್ನು ಕೂಡಾ ಜಾರಿ ಮಾಡಬೇಕಾಗುತ್ತದೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ಸಲುವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಾದ ಕ್ರಮಗಳನ್ನು […]

ಮತ್ತೆ ಏರಿಕೆ ಕಾಣುತ್ತಿರುವ ಕೋವಿಡ್| ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಾದರೂ ಅಚ್ಚರಿಯಿಲ್ಲ- ಡಿ.ಸಿ ಎಚ್ಚರಿಕೆ Read More »

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

ಬೆಂಗಳೂರು : ಕೇರಳದಲ್ಲಿ ಕೊರೊನಾ ಆವಳಿ ಹೆಚ್ಚಾಗಿದ್ದು, ಮೂರನೇ ಅಲೆ ಕಾಣಿಸಿಕೊಂಡಿದ್ಯಾ ಅನ್ನೋ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗ ತೊಡಗಿದೆ. ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದೆ. ಮೈಕ್ರೋಕಂಟೈನ್ ಮೆಂಟ್, ನಿಗದಿತ ಗುಂಪುಗಳಿಗೆ ವ್ಯಾಕ್ಸಿನೇಷನ್ ಹೆಚ್ಚಿಸುವ, ಗಡಿ ಭಾಗಗಳಲ್ಲಿಯೂ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ Read More »

ಸುಬ್ರಹ್ಮಣ್ಯ: ಶ್ರೀ ಹೋಮ್’ಕೇರ್ ಕ್ಲಿನಿಕ್’ನಲ್ಲಿ ಇನ್ನು ಮದ್ಯಾಹ್ನದ ಬಳಿಕವೂ ವೈದ್ಯಕೀಯ ಸೇವೆ ಲಭ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೋಮ್’ಕೇರ್ ಕ್ಲಿನಿಕ್ ನಲ್ಲಿ ಇನ್ನು ಅಪರಾಹ್ನವೂ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಿದೆ ಎಂದು ಕ್ಲಿನಿಕ್ ನ ವೈದ್ಯರು ತಿಳಿಸಿದ್ದಾರೆ. ಸುಬ್ರಹ್ಮಣ್ಯದ ಕಾರ್ತಿಕೇಯ ಬಿಲ್ಡಿಂಗ್ ನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸ್ಥಳೀಯ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಒದಗಿಸುತ್ತಿದ್ದ ಹೋಮಿಯೋ ಕ್ಲಿನಿಕ್ ಇದುವರೆಗೆ ಬೆಳಿಗ್ಗೆ 9:00 ಗಂಟೆಯಿಂದ ಮದ್ಯಾಹ್ನ 1:00 ರ ವರೆಗೆ ಕ್ಲಿನಿಕ್ ತೆರೆದಿರುತ್ತಿತ್ತು. ಇದೀಗ ಜನತೆಯ ಅನುಕೂಲಕ್ಕಾಗಿ ಕ್ಲಿನಿಕ್ ನ್ನು ಅಪರಾಹ್ನವೂ ತೆರೆಯಲು ನಿರ್ಧರಿಸಲಾಗಿದೆ. ಕ್ಲಿನಿಕ್ ಇನ್ನು ಬೆಳಗಿನ

ಸುಬ್ರಹ್ಮಣ್ಯ: ಶ್ರೀ ಹೋಮ್’ಕೇರ್ ಕ್ಲಿನಿಕ್’ನಲ್ಲಿ ಇನ್ನು ಮದ್ಯಾಹ್ನದ ಬಳಿಕವೂ ವೈದ್ಯಕೀಯ ಸೇವೆ ಲಭ್ಯ Read More »

ಬೊಮ್ಮಾಯಿ ಕ್ಯಾಬಿನೆಟ್ ಗುರುವಾರ ಅಸ್ತಿತ್ವಕ್ಕೆ? ಒಂದೇ ಬಾರಿಗೆ ‘ಸಮಗ್ರ’ ಸಚಿವ ಸಂಪುಟ

ಬೆಂಗಳೂರು: ಮಂತ್ರಿಗಿರಿಗಾಗಿ ನಾಯಕರ ಕಸರತ್ತು, ಶಾಸಕರ ಲಾಬಿ, ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ರಚನೆ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬಸವರಾಜ್ ಬೊಮ್ಮಾಯಿ, ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಮ್ಮಾಯಿ ತೆಗೆದುಕೊಂಡು ಹೋಗಿದ್ದ 21 ಜನರ ಲಿಸ್ಟ್ ನಲ್ಲಿ ಕೇವಲ 6 ಜನರ ಹೆಸರನ್ನು

ಬೊಮ್ಮಾಯಿ ಕ್ಯಾಬಿನೆಟ್ ಗುರುವಾರ ಅಸ್ತಿತ್ವಕ್ಕೆ? ಒಂದೇ ಬಾರಿಗೆ ‘ಸಮಗ್ರ’ ಸಚಿವ ಸಂಪುಟ Read More »

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು

ಉ.ಪ್ರದೇಶ: ಸ್ವಾತಂತ್ರ್ಯ ದಿನಾಚರಣೆಗಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನಾಟಕ ಅಭ್ಯಾಸದ ವೇಳೆ ಬಾಲಕನೊಬ್ಬ ನೇಣಿನ ಕುಣಿಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಬದೌನ್ ಜಿಲ್ಲೆಯ ಬಾಬತ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಭಗತ್ ಸಿಂಗ್ ಅವರನ್ನು ಗಲ್ಲಿಗೆ ಹಾಕುವ ದೃಶ್ಯದ ಅಭ್ಯಾಸದ ವೇಳೆ ನೇಣು ಕುಣಿಕೆ ಹಾಕಿದಾಗ ಆಕಸ್ಮಿಕವಾಗಿ ಸ್ಟೂಲ್ ನಿಂದ ಬಾಲಕ ಬಿದ್ದಿದ್ದಾನೆ. ಮೃತ ಬಾಲಕ ಶಿವಂ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಭಗತ್ ಸಿಂಗ್, ರಾಜ್ ಗುರು ಮತ್ತು

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು Read More »

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ

ಬೆಂಗಳೂರು: ಕನ್ನಡದ ಕಿರುತೆರೆ ನಟ (ವಿಲನ್ ಪಾತ್ರಧಾರಿ) ಚಿಕ್ಕಮಗಳೂರು ಜಿಲ್ಲೆ ತಾಲೂಕಿನ ಕಳಸಾಪುರ ನಿವಾಸಿ ಉಮೇಶ್, ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾನೆ. ಉಮೇಶನ ಬಣ್ಣದ ಮಾತುಗಳಿಗೆ ಮರುಳಾದ ಯುವತಿ ಒಂದು ಮಗುವಿಗೆ ಜನ್ಮ ನೀಡಿದ್ದಾಳೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಯುವತಿ ಉಮೇಶ್ ನಿಂದ ಮೋಸಕ್ಕೊಳಗಾಗಿದ್ದಾಳೆ. ಈಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ಮಗುವಿಗೆ ಕಾರಣನಾಗಿದ್ದಾನೆ ವಂಚಕನಿಂದ ಮೋಸಹೋಗಿರುವ ಯುವತಿ ಆತನ ಮನೆ ಎದುರು ತನ್ನ 5 ತಿಂಗಳ ಮಗುವಿನ ಜೊತೆ ಧರಣಿ ಕುಳಿತಿದ್ದಾಳೆ. ಆತನೊಂದಿಗೆ ಮದುವೆ ಮಾಡಿಸಿ

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ Read More »

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್

ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್ Read More »

ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ!

ಚಾಮರಾಜನಗರ: ಬಿಎಸ್​ಪಿ ಪಕ್ಷದಿಂದ ಅಮಾನತುಗೊಂಡಿರುವ ಕೊಳ್ಳೇಗಾಲ ಶಾಸಕ ಎನ್​.ಮಹೇಶ್ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಕಳೆದ ಹಲವು ದಿನಗಳಿಂದ ಬಿಜೆಪಿ ಸೇರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಸೂಚನೆ ನೀಡಿದ್ದ ಎನ್​.ಮಹೇಶ್ ಇಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಗುಂಡ್ಲುಪೇಟೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಬಿಜೆಪಿ ಸೇರುವ ಬಗ್ಗೆ ಬಹಿರಂಗವಾಗಿ ಹೇಳಿದರು. ಬಿಜೆಪಿಗೆ ಬರುವಂತೆ ಯಡಿಯೂರಪ್ಪ ಆಹ್ವಾನಿಸಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಸೇರುವ ದಿನಾಂಕ ನಿಗದಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ! Read More »

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ

ಕುಷ್ಟಗಿ : ಪತ್ನಿಯನ್ನು ಪತಿ ಮೋಬೈಲ್ ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು, ಕಲ್ಲು ಎತ್ತಿ ಹಾಕಿ ಬೀಭತ್ಸವಾಗಿ ಕೊಂದು ಹಾಕಿರುವ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಮಂಜುಳಾ ಮಂಜುನಾಥ ಕಟ್ಟಿಮನಿ(25) ಮೃತ ನತದೃಷ್ಟೆ. ಸ್ಥಳೀಯ ತಾಲೂಕಾ ಸರ್ಕಾರಿ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಹೊರಗುತ್ತಿಗೆಯಲ್ಲಿ ಸೇವೆಯಲ್ಲಿದ್ದಳು. ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದ ಮಂಜುಳಾ ಈಕೆಯನ್ನು ಕೊಪ್ಪಳ ತಾಲೂಕಾ ಮುದ್ದಾಬಳ್ಳಿಯ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ಮಂಜುನಾಥ ಕಟ್ಟಿಮನಿ ಕುಷ್ಟಗಿಯ ಕೆನರಾ ಬ್ಯಾಂಕಿನಲ್ಲಿ ಅಟೆಂಡರ್

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ Read More »

ಭಾರತಕ್ಕೆ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕ ಫಿಕ್ಸ್

ಟೋಕಿಯೋ: ಭಾರತದ ಪಾಲಿಗೆ ಇಂದು ಶುಭ ಶುಕ್ರವಾರ. ಮಹಿಳಾ ಬಾಕ್ಸಿಂಗ್ ಕ್ವಾರ್ಟರ್ ಫೈನಲ್‌ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ವಿರುದ್ದ 4-1 ಅಂತರದಲ್ಲಿ ಜಯಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಹಿನ್ನಲೆ ಭಾರತಕ್ಕೆ ಮತ್ತೊಂದು ಪದಕ ಖಚಿತ ಪಡಿಸಿದ್ದಾರೆ. ಮಹಿಳಾ ವಾಲ್ಟರ್‌ವೇಟ್‌ ವಿಭಾಗದಲ್ಲಿ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ಎದುರು ಪ್ರಾಬಲ್ಯ ಮೆರದ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಇದೀಗ ಕಂಚಿನ ಪದಕ ಖಚಿತ

ಭಾರತಕ್ಕೆ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕ ಫಿಕ್ಸ್ Read More »