ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು : ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಅಪಘಾತವಾಗಿರುವ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ.
ಗುರು ಅವರ ತಲೆ ಮತ್ತು ಕಾಲಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ತೀವ್ರತೆಗೆ ಮುಂಭಾಗದ ಟೈರು ಸ್ಫೋಟಗೊಂಡಿದೆ.ಗುರುರಾಜ್ ಅವರು ಹೈದರಾಬಾದ್ ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

. Ad Widget . Ad Widget

Leave a Comment

Your email address will not be published. Required fields are marked *