ಮಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮಯಾಗಿದೆ. ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಾರಾಂತ್ಯ ಕರ್ಪ್ಯೂ ಈ ವಾರವೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆವರೆಗೂ ಸಂಚಾರಕ್ಕೆ ಅವಕಾಶವಿದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಮುಂಜಾನೆ 7ರ ವರೆಗೆ ಕರ್ಪ್ಯೂ ಇರಲಿದ್ದು, ಅಗತ್ಯ ಸೇವೆಗಳಿಗಷ್ಟೇ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.