ನವದೆಹಲಿ: ದೇಶದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಜನರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೀಗ ಇದರ ಜೊತೆ ಜೊತೆಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸುವ ಮುಕಾಂತರ ತರ ಜನರಿಗೆ ಸರಕಾರ ಶಾಕ್ ಕೊಟ್ಟಿದೆ.
ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಇಂದಿನಿಂದ ದೇಶಾದ್ಯಂತ ಲೀಟರ್ ಅಮುಲ್ ಹಾಲಿಗೆ 2 ರೂಪಾಯಿ ಏರಿಸಲಾಗಿದೆ. ಹೀಗೆ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಒಂದಾದ ನಂತರ ಒಂದು ಬೆಲೆ ಏರಿಕೆ ಬರೆ ಎಳೆಯುತ್ತಲೇ ಇದೆ. ಇಂದು ದಿನನಿತ್ಯ ಬಳಸುವ ಅಗತ್ಯ ವಸ್ತುಗಳಲ್ಲಿ ಒಂದಾದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯೂ ಏರಿಕೆ ಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 14.2 ಕೆ.ಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ 25.50 ರೂ. ಏರಿಕೆ ಮಾಡಿವೆ. ಇದರೊಂದಿಗೆ ನವದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 834.50 ರೂ ಆಗಿದೆ. ನೂತರ ಪರಿಷ್ಕೃತ ದರ ಜುಲೈ 1 ರಿಂದ ಅನ್ವಯಯವಾಗಲಿದೆ.
ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿರುವ ಸರ್ಕಾರದ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 834.50 ರೂ. ಇದ್ದರೆ, ಕೊಲ್ಕತ್ತಾದಲ್ಲಿ 835.50 ರೂ. ಇದೆ. ಅದೇ ರೀತಿ ಚೆನ್ನೈನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ತುಂಬಾ ದುಬಾರಿಯಾಗಿದ್ದು, 850.50 ರೂ.ಗೆ ಏರಿಕೆಯಾಗಿದೆ.
ಇನ್ನು, ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನೂ ತೈಲ ಮಾರುಕಟ್ಟೆ ಕಂಪನಿಗಳು ಜಾಸ್ತಿ ಮಾಡಿವೆ. ಪ್ರತಿ ಸಿಲಿಂಡರ್‌ಗೆ 84 ರೂ. ಏರಿಸಿವೆ. ಕಳೆದ ೬ ತಿಂಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ 140 ರೂ.ಏರಿಕೆಯಾಗಿದೆ.
ಈ ವರ್ಷ ಮೊದಲ ಬಾರಿಗೆ ಫೆಬ್ರವರಿ 4 ರಂದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ 25 ರೂಪಾಯಿ ಏರಿಸಲಾಗಿತ್ತು. ಬಳಿಕ ಫೆಬ್ರವರಿ 15 ರಂದು 50 ರೂಪಾಯಿ ಏರಿಕೆ ಮಾಡಲಾಗಿತ್ತು. ಫೆಬ್ರವರಿ 25 ಮತ್ತು ಮಾರ್ಚ್ 1 ರಂದು ಮತ್ತೆ 25 ರೂ. ಹೆಚ್ಚಿಸಲಾಗಿತ್ತು. ಇದರೊಂದಿಗೆ ಫೆಬ್ರವರಿ ತಿಂಗಳೊಂದರಲ್ಲೇ 3 ಬಾರಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸಲಾಗಿತ್ತು.
ಪ್ರತಿ ಗ್ಯಾಸ್ ಸಿಲಿಂಡರ್‌ಗೆ 125 ರೂಪಾಯಿ ಏರಿಕೆಯಾದ ಬಳಿಕ, ಏಪ್ರಿಲ್ 1 ರಂದು ಪ್ರತೀ ಸಿಲಿಂಡರ್‌ಗೆ 10 ರೂಪಾಯಿ ಕಡಿತ ಮಾಡಲಾಗಿತ್ತು.
ಇಂದಿನಿಂದ ಹಾಲಿನ ದರ ಲೀಟರ್ಗೆ 2 ರೂಪಾಯಿ ಹೆಚ್ಚಳ!
ಇಂಧನ ಬೆಲೆ ಏರಿಕೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಡುವೆ ಇದೀಗ ಅಮೂಲ್ ಹಾಲಿನ ದರವು ಹೆಚ್ಚಳವಾಗಿದೆ. ಇಂದಿನಿಂದ (ಜುಲೈ 1) ದೇಶಾದ್ಯಂತ ಅಮೂಲ್ ಹಾಲಿನ ದರ ಲೀಟರ್ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್ (GCMMF) ಈ ವಿಷಯವನ್ನು ಬುಧವಾರ ಪ್ರಕಟಿಸಿದೆ.
ತಾಜಾ, ಗೋಲ್ಡ್, ಶಕ್ತಿ, ಟೀ ಸ್ಪೆಷನ್ ಸೇರಿದಂತೆ ಅಮೂಲ್ ಹಾಲಿನ ಎಲ್ಲ ಇತರೆ ಬ್ರಾಡ್ಗಳ ಬೆಲೆಗಳ ಸಹ ಏರಿಕೆ ಆಗಲಿದೆ. ಅದೇ ರೀತಿ ಹಸು ಮತ್ತು ಎಮ್ಮೆಯ ಹಾಲು ಸಹ ಹೆಚ್ಚಳವಾಗಲಿದೆ. ಒಂದು ವರ್ಷ ಏಳು ತಿಂಗಳುಗಳ ನಂತರ ಅಮೂಲ್ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ಪಾದನಾ ವೆಚ್ಚದಲ್ಲಿನ ಹೆಚ್ಚಳವೇ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಕಂಪನಿ ತಿಳಿಸಿದೆ.