Ad Widget .

ಬಂಟ್ವಾಳ: ಕಾಲೇಜ್ ಬಸ್, ಬೈಕ್ ಅಪಘಾತ- ತಪ್ಪಿದ ಅನಾಹುತ

ಬಂಟ್ವಾಳ: ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಜು.2ರಂದು ಬೆಳಗ್ಗೆ ನಡೆದಿದೆ.

Ad Widget . Ad Widget .

Ad Widget . Ad Widget .

ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ಸೇರಿದ ಬಸ್‌ನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಆಸ್ಪತ್ರೆಯ ಸಿಬ್ಬಂದಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಎಲ್ಲರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್‌ನಲ್ಲಿ ಸುಮಾರು 13 ಜನರಿದ್ದು, ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಪ್ ನರ್ಸ್ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಜಾಕೀರ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರಗೆ ಬಸ್ ರಸ್ತೆ ಬದಿಯಲ್ಲಿರುವ ಮರದಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದಲ್ಲಿ ಪ್ರಪಾತ ಇದ್ದು, ಮಹಿಳೆಯೊಬ್ಬರು ಕೆಳಗಡೆ ಉರುಳಿ ಬಿದ್ದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *