Ad Widget .

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

Ad Widget . Ad Widget .

Ad Widget . Ad Widget .

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *