ಮಂಗಳೂರು : ಕಳೆದವಾರ ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಇದೀಗ ಸಡಿಲಗೊಳಿಸಲಾಗಿದೆ. ವೀಕೆಂಡ್ ನಲ್ಲಿ ಕೊಂಚ ರಿಲೀಫ್ ನೀಡಲಾಗಿದ್ದು, ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.
ವಾರಾಂತ್ಯದಲ್ಲಿ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ? ಜಿಲ್ಲಾಡಳಿತದ ಮಾರ್ಗಸೂಚಿ ಏನು?
ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ.
ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಅವಕಾಶ.
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
ಆಹಾರ, ದಿನಸಿ, ಹಣ್ಣುಗಳು, ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ, ಹಾಲಿನ ಬೂತ್ ಓಪನ್ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು ಕಾರ್ಯ ನಿರ್ವಹಿಸಲು ಅವಕಾಶ.
ಬೀದಿಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಮದ್ಯದಂಗಡಿಗಳಿಗೆ ಅವಕಾಶ.
ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಪಾರ್ಸೆಲ್ ಗೆ ಅವಕಾಶ.
ಹೋಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮತ್ತು ಹೋಂ ಡೆಲಿವರಿಗೆ ಅವಕಾಶ.
ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ವಿಕೇಂಡ್ ಕರ್ಫ್ಯೂ ವೇಳೆ ಅನುಮತಿ.
ವಿಕೇಂಡ್ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೂ ಅನುಮತಿ