Ad Widget .

ಯಡಿಯೂರಪ್ಪ ಕುಟುಂಬ ಸಮೇತ ಜೈಲುಪಾಲಾಗ್ತಾರೆ – ಹೆಚ್.ವಿಶ್ವನಾಥ್

ಮೈಸೂರು: ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೆ ಅವರ ಪುತ್ರ ಬಿ.ವೈ. ವಿಜಯೇಂದ್ರ. ಸಿಎಂ ಯಡಿಯೂರಪ್ಪನವರ ನಕಲಿ ಸಹಿ ಮಾಡಿ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು, ಇದೀಗ ಇಡೀ ಕುಟುಂಬವನ್ನೇ ಜೈಲಿಗೆ ಕಳುಹಿಸುತ್ತಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

Ad Widget . Ad Widget .

ಮೈಸೂರಿನಲ್ಲಿ ಮಾತನಾಡಿದ ಅವರು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿ, ಸಿಎಂ ಪುತ್ರ ವಿಜಯೇಂದ್ರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಆರೋಪಿಸಿದ್ದಾರೆ.

Ad Widget . Ad Widget .

ಹಿಂದುಳಿದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ರಮೇಶ್ ಸಿಡಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರವಿದೆ ಎಂದು ಆರೋಪಿಸಿದ್ದಾರೆ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ಎಂದು ನೋಡುತ್ತೇವೆ. ರಾಜಕಾರಣದಲ್ಲಿ ಇದು ಸರಿಯಲ್ಲ ಎಂದು ವಿಶ್ವನಾಥ್ ಗುಡುಗಿದ್ದಾರೆ.

Leave a Comment

Your email address will not be published. Required fields are marked *