Ad Widget .

ಇಂದಿನಿಂದ ಕುಕ್ಕೆ, ಧರ್ಮಸ್ಥಳದಲ್ಲಿ ದೈವ ದರ್ಶನ ಭಾಗ್ಯ. ಸೇವೆಗಳಿಗಿಲ್ಲ ಅವಕಾಶ

ಲಾಕ್ ಡೌನ್ ಸಡಿಲ ಮಾಡಿ ದೇವಸ್ಥಾನಗಳ ದರ್ಶನಕ್ಕೆ ಸರಕಾರ ಅನುಮತಿ ನೀಡಿರುವ ಹಿನ್ನಲೆಯಲ್ಲಿ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನದಲ್ಲಿ ಇಂದಿನಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

Ad Widget . Ad Widget .

ಕುಕ್ಕೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ ಸೇವೆಗಳು ಸರಕಾರದ ಮುಂದಿನ ಆದೇಶದ ತನಕ ನಡೆಯುವುದಿಲ್ಲ.ಮಂಗಳಾರತಿ ಸೇವೆ ನೆರವೇರಿಸಲುಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

Ad Widget . Ad Widget .

ಎಲ್ಲಾ ಭಕ್ತರಿಗೆ ಬೆಳಗ್ಗೆ .7 ರಿಂದ 11.30 ತನಕ, ಮಧ್ಯಾಹ್ನ 12.15ರಿಂದ 1.30ರ ತನಕ ದರುಶನಕ್ಕೆ ಅವಕಾಶವಿದೆ. ನಂತರ 2.30 ಸಂಜೆ 6.30ರ ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಮಂಗಳಾರತಿ ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ. ಈ ಸೇವೆಗೆ ಮಾತ್ರ ಅವಕಾಶವಿರುವುದರಿಂದ ಪ್ರತಿ 15 ನಿಮಿಷಕ್ಕೊಮ್ಮೆ ಶ್ರೀ ದೇವರಿಗೆ ಮಂಗಳಾರತಿ ನಡೆಯಲಿದೆ. ಮಂಗಳಾರತಿಗೆ ಯಾವುದೇ ಪ್ರಸಾದ ನೀಡಲಾಗುವುದಿಲ್ಲ.ದೇವಳದ ವಸತಿ ಗೃಹದಲ್ಲಿ ತಂಗಲು ಅವಕಾಶವಿಲ್ಲ. ಗಂಧ ಪ್ರಸಾದ, ತೀರ್ಥ ಪ್ರಸಾದ, ಮೂಲಮೃತ್ತಿಕೆ ಪ್ರಸಾದ ನೀಡಲಾಗುವುದಿಲ್ಲ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಭಕ್ತಾಧಿಗಳಿಗೆ ಬೋಜನ ಪ್ರಸಾದದ ವ್ಯವಸ್ಥೆ ಇರುವುದಿಲ್ಲ.

ಪಂಚಕಜ್ಜಾಯ, ಲಡ್ಡುಪ್ರಸಾದ ವಿತರಣೆಯಿಲ್ಲ. ದೇವಳದ ಮುಂಭಾಗದಲ್ಲಿ ಕಡ್ಡಾಯವಾಗಿ ಥರ್ಮಾಮೀಟರ್‌ನಿಂದ ತಪಾಸಣೆ ಮಾಡಲಾಗುವುದು.ಅಲ್ಲದೆ ಒಳಪ್ರವೇಶಿಸುವಾಗ ಸ್ಯಾನಿಟೈಸರ್ ನೀಡಲಾಗುವುದು.ಜ್ವರ,ಕೆಮ್ಮು, ಶೀತವಿರುವ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿಲ್ಲ. ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಶ್ರೀ ದೇವಳಕ್ಕೆ ರಾಜಗೋಪುರದ ಪ್ರಧಾನ ಧ್ವಾರದ ಮೂಲಕ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತದೆ. ಉಳಿದ ಧ್ವಾರದಲ್ಲಿ ಭಕ್ತರಿಗೆ ಪ್ರವೇಶ ಇರುವುದಿಲ್ಲ.ಹೊರ ಬರಲು ಮತ್ತೊಂದು ದ್ವಾರವನ್ನು ಬಳಸಿಕೊಳ್ಳಲಾಗುವುದು. ಪ್ರಧಾನ ಧ್ವಾರದ ಬಳಿಕ ಹೊರಾಂಗಣ ಮತ್ತು ಒಳಾಂಗಣಕ್ಕೆ ಪ್ರವೇಶಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಚೌಕವನ್ನು ಬರೆಯಲಾಗಿದೆ.ಶ್ರೀ ದೇವಳದ ಹೊರಾಂಗಣ,ಒಳಾಂಗಣ ಸೇರಿದಂತೆ ದೇವಳದ ಸುತ್ತಲೂ ಚೌಕವನ್ನು ಬರೆಯಲಾಗಿದೆ. ಭಕ್ತರು ಈ ಚೌಕದ ಮೂಲಕ ಸರದಿ ಸಾಲಿನಲ್ಲಿಮುಂದಡಿಯಿಡಬೇಕು.ಶ್ರೀ ದೇವಳದ ಪ್ರವೇಶದಿಂದ ಹೊರ ಬರುವ ತನಕವೂ ಭಕ್ತರು ಚೌಕದಲ್ಲಿ ಮುನ್ನಡೆಯಬೇಕು. ಈ ಮೂಲಕ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಬೇಕಾದ ವ್ಯವಸ್ಥೆ ಮಾಡಲಾಗಿದೆ. ಆದಿ ಸುಬ್ರಹ್ಮಣ್ಯ ದೇವಸ್ಥಾನ ಪ್ರವೇಶಿಸುವಾಗಲೂ ಇದೇ ಕ್ರಮವನ್ನು ಅನುಸರಿಸಲಾಗುತ್ತದೆ. ಕೋವಿಡ್ 19 ಮಾರ್ಗಸೂಚಿಗಳಿಗೆ ಅನುಗುಣವಾಗಿ ಭಕ್ತರು ಶ್ರೀ ದೇವರ ದರುಶನ ಪಡೆಯಲು ಬೇಕಾದ ಸೂಕ್ತ ವ್ಯವಸ್ಥೆಯನ್ನು ಶ್ರೀ ದೇವಳ ನಡೆಸಿದೆ.ಭಕ್ತರು ಶ್ರೀ ಸಹಕರಿಸಬೇಕು ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ತಿಳಿಸಿದ್ದಾರೆ.

ಧರ್ಮಸ್ಥಳದಲ್ಲೂ ಇಂದಿನಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 6ರಿಂದ 11 ರವರೆಗೆ, ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ, ಸಂಜೆ 7ರಿಂದ 8.30 ವರೆಗೆ ದರ್ಶನಕ್ಕೆ ಅವಕಾಶವಿದೆ.

ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ದೇವರ ದರ್ಶನಕ್ಕೆ ಅವಕಾಶವಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸೇಷನ್, ಅಂತರ ಕಾಪಾಡುವುದು ಕಡ್ಡಾಯಗೊಳಿಸಲಾಗಿದೆ.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗುವವರು ದೇವಸ್ಥಾನದ ಬಳಿ ಇರುವ ಪ್ರವಚನ ಮಂಟಪದಲ್ಲಿ ಹೆಸರು ನೋಂದಾಯಿಸಬೇಕು. ಹೆಗ್ಗಡೆಯವರ ಭೇಟಿಯ ಸಮಯ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ, ಸಂಜೆ 4 ಗಂಟೆಯಿಂದ 5ರವರೆಗೆ. ವಸತಿ ಸೌಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ದೇವಳ ಕಚೇರಿ: 08256- 266666/ 9449567232 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *