Ad Widget .

ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ತಗ್ಗಿದ ಸೋಂಕು, _ ತಿಂಗಳಲ್ಲೇ ಅತೀ ಕನಿಷ್ಠ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 34,703 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 111 ದಿನಗಳಲ್ಲೇ ಮೊದಲ ಬಾರಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದೆ.ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,06,19,932ಕ್ಕೆ ಏರಿಕೆಯಾಗಿದೆ.

Ad Widget . Ad Widget .

ಕೋವಿಡ್ ಸಾವಿನ ಸಂಖ್ಯೆಯೂ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ 553 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,03,281ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,64,357ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,52,294ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 51,864 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಿಕವರಿ ರೇಟ್ 97.17%ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Ad Widget . Ad Widget .

ದೇಶದಲ್ಲಿ ಈವರೆಗೆ 35,75,53,612 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Leave a Comment

Your email address will not be published. Required fields are marked *