Ad Widget .

ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ.

Ad Widget . Ad Widget .

ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿದ್ದಾರೆ. ನಂತರ ಪೊಲೀಸರು ಆಗಮಿಸಿದ್ದಾರೆ. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದೆ.

Ad Widget . Ad Widget .

ಘಟನೆ ಕುರಿತಂತೆ ಚಿದಾನಂದ ಸವದಿ ಮಾತನಾಡಿದ್ದು, ಆಕಸ್ಮಿಕವಾಗಿ ಕಾರಿಗೆ ಅವರು ಅಡ್ಡ ಬಂದಿದ್ದರಿಂದ ಅಪಘಾತವಾಗಿದೆ. ಅಪಘಾತಕ್ಕೀಡಾದ ಕಾರ್ ನಲ್ಲಿ ನಾನು ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ.

ನನ್ನ ಕಾರನ್ನು ಚಾಲಕ ಚಲಾಯಿಸುತ್ತಿದ್ದು, ಕಾರಿನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದರು.
ನಾನು ಬೇರೆ ಸ್ನೇಹಿತರೊಂದಿಗೆ 30 ಕಿಲೋಮೀಟರ್ ದೂರದಲ್ಲಿ ಪ್ರಯಾಣಿಸುತ್ತಿದ್ದೆ. ಘಟನೆಯ ವೇಳೆ ನಾನು ಇರಲಿಲ್ಲ. ಅಪಘಾತದ ನಂತರ ಚಾಲಕ ಮಾಹಿತಿ ತಿಳಿಸಿದ ಕೂಡಲೇ ಸ್ಥಳಕ್ಕೆ ತೆರಳಿ ಆಂಬುಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ನಾನೇ ದಾಖಲಿಸಿದ್ದೇನೆ. ಸ್ಥಳದಲ್ಲಿದ್ದವರೊಂದಿಗೆ ಮಾತನಾಡಿ, ಪೊಲೀಸರಿಗೂ ಮಾಹಿತಿ ನೀಡಿ ಬಂದಿದ್ದೇನೆ ಎಂದು ಚಿದಾನಂದ ಸವದಿ ಹೇಳಿದ್ದಾರೆ.

Leave a Comment

Your email address will not be published. Required fields are marked *