ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ


ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

. Ad Widget . Ad Widget . Ad Widget

2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಪ್ರಧಾನಿ ಮೋದಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಈ ಕಾರಣ ಆ ಸ್ಥಾನಕ್ಕೆ ಕೆ. ಅಣ್ಣಾಮಲೈ ಉಚಿತ ಅಭ್ಯರ್ಥಿ ಎಂದು ಬಿಂಬಿಸಲಾಗಿತ್ತು. ಅದಂತೆಯೇ ಅಣ್ಣಾಮಲೈ ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

. Ad Widget .

Leave a Comment

Your email address will not be published. Required fields are marked *