Ad Widget .

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು

ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ.

Ad Widget . Ad Widget .

ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಇನ್ನು ಮುಂದೆ ಚಾಲನಾ ಪರವಾನಿಗೆ , ನೋಂದಣಿ ಪ್ರಮಾಣ ಪತ್ರ, ವಿಮೆ, ಫಿಟ್‍ನೆಸ್ ಪ್ರಮಾಣ ಪತ್ರ , ಪರ್ಮಿಟ್ , ವಾಯುಮಾಲಿನ್ಯ ಪ್ರಮಾಣ ಪತ್ರ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಎಲೆಕ್ಟ್ರಾನಿಕ್ ಮಾದರಿಯಲ್ಲಿ ಸಲ್ಲಿಸಬಹುದು.
ಡಿಜಿ ಲಾಕರ್ ಅಥವಾ ಎಂಪರಿವಾಹನ್ ಅಪ್ಲಿಕೇಶನ್‍ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ನಿಯಮ ಜಾರಿ ಮಾಡುವ ಅಧಿಕಾರಿಗಳು ಮೊಬೈಲ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ಈ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಧಿಕೃತ ಎಂದು ಪರಿಗಣಿಸಬೇಕು ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

Ad Widget . Ad Widget .

ಈ ಎರಡು ಅಪ್ಲಿಕೇಷನ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ದಾಖಲೆಗಳು ಸ್ವೀಕಾಹಾರ್ಹ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಗಳು ಸ್ಪಷ್ಟಪಡಿಸಿವೆ. ಅಧಿಕಾರಿಗಳು ಇ ಚಲನ್ ಆಯಪ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸಬಹುದು. ಇದರಿಂದಾಗಿ ನಕಲಿ ದಾಖಲೆ ಹಾವಳಿಯನ್ನು ತಡೆಗಟ್ಟಲು ಸಾಧ್ಯ ಇದೆ. ವಾಹನ ಸವಾರರು ಪ್ಲೇ ಸ್ಟೋರ್‍ನಲ್ಲಿ ಡಿಜಿ ಲಾಕರ್ ಮತ್ತು ಎಂಪರಿವಾಹನ್ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ದಾಖಲಿಸಿ ಕೆವೈಸಿ ದಾಖಲಿಸಿ ನೋಂದಣಿ ಮಾಡಿಕೊಳ್ಳಬೇಕು.

ತದನಂತರ ಕರ್ನಾಟಕ ಸರ್ಕಾರವನ್ನು ಆಯ್ಕೆ ಮಾಡಿಕೊಂಡು ನಿರ್ದಿಷ್ಟ ದಾಖಲೆಗಳನ್ನು ಡೌನ್‍ಲೋಡ್ ಹಾಗೂ ಸೇವ್ ಮಾಡಿಕೊಳ್ಳಬಹುದು. ವಾಹನ ಮಾಲೀಕರಲ್ಲದವರು ಚಾಲನೆ ಮಾಡುತ್ತಿದ್ದರೆ ವಾಹನದ ಮಾಲೀಕನ ಆಯಪ್‍ನಿಂದ ದಾಖಲಾತಿಗಳನ್ನು ವರ್ಗಾವಣೆ ಮಾಡಿಕೊಂಡು ತಪಾಸಣೆ ವೇಳೆ ಹಾಜರುಪಡಿಸಬಹುದು. ಇದರಿಂದಾಗಿ ಡಿಜಿಟಲ್ ದಾಖಲೆಗಳಿಂದ ಅಸಲಿ ದಾಖಲೆಗಳು ಕಳೆದುಹೋಗುವ ಭಯ ಇಲ್ಲವಾಗುತ್ತದೆ. ಪೊಲೀಸರಿಗೂ ಕೂಡ ಈ ವ್ಯವಸ್ಥೆ ಸೂಕ್ತವಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

ಈ ಮೊದಲು ಚಾಲನಾ ಪರವಾನಗಿ ಹೊರತುಪಡಿಸಿ ಉಳಿದೆಲ್ಲಾ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಹಾಜರುಪಡಿಸಲು ನಗರ ಪೊಲೀಸ್ ಆಯುಕ್ತರು ಅವಕಾಶ ನೀಡಿದ್ದರು. ಪರಿಷ್ಕøತ ಆದೇಶದ ಪ್ರಕಾರ ಇನ್ನು ಮುಂದೆ ಚಾಲನಾ ಪರವಾನಗಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಡಿಜಿಟಲ್ ರೂಪದಲ್ಲೇ ಹಾಜರುಪಡಿಸಲು ಅವಕಾಶ ಕಲ್ಪಿಸಿದ್ದು , ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಂತಾಗಿದೆ.

Leave a Comment

Your email address will not be published. Required fields are marked *