Ad Widget .

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ ಕರಂದ್ಲಾಜೆ.!

Ad Widget . Ad Widget .

ಉಡುಪಿ: ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಈ ಹಿಂದಿನ ಎಲ್ಲಾ ಟ್ವೀಟ್ ಗಳನ್ನು ಅಳಿಸಿ ಹಾಕಿದ್ದಾರೆ.

Ad Widget . Ad Widget .

ನಿನ್ನೆಯಷ್ಟೆ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಹಿಂದಿನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ಟ್ವೀಟ್ ಹೊರತುಪಡಿಸಿ ಉಳಿದ ಅವರ ಎಲ್ಲ ಸಂದೇಶಗಳನ್ನು ಡಿಲೀಟ್ ಮಾಡಿರುವುದು ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
೨೦೧೦ರಿಂದ ಟ್ವಿಟರ್ ನಲ್ಲಿ ಸಕ್ರಿಯವಾಗಿರುವ ಶೋಭಾ ಕರಂದ್ಲಾಜೆ ಅವರು ಹಲವಾರು ರಾಜಕೀಯ ಬೆಳವಣಿಗೆಗಳ ಹಾಗೂ ಕೋಮುಗಲಭೆಯ ಕುರಿತು ವಿವಾದಾತ್ಮಕ ಟ್ವೀಟ್ ಗಳನ್ನು ಮಾಡಿದ್ದರು. ಆದರೆ ಸಚಿವರಾಗುವ ಸುದ್ದಿ ಖಾತ್ರಿಯಾಗುತ್ತಿದ್ದಂತೆ ಈ ಹಿಂದಿನ ಎಲ್ಲಾ ಟ್ವೀಟ್‌ಗಳು ಡಿಲೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *