ಬೆಂಗಳೂರು: ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರಂಭಿಸಲು ಈಗಾಗಲೇ ಆದೇಶ ಹೊರಬಿದ್ದಿದೆ.
ಆಧಾರ್ ಕಾರ್ಡ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದೆ. ಆದರೆ ಆಧಾರ್ ಕಾರ್ಡ್ ನೊಂದಣಿ ಮಾಡಲು ಅಥವಾ ತಿದ್ದುಪಡಿ ಮಾಡಲು ನಗರ ಪ್ರದೇಶಗಳಿಗೆ ಅಲೆದಾಡ ಬೇಕಾಗುತ್ತದೆ. ಇದೀಗ ಅದೆಕೆಲ್ಲ ಬ್ರೇಕ್ ಹಾಕಲು ಸರಕಾರಿ ನಿರ್ಧರಿಸಿದ್ದು ಗ್ರಾಮೀಣ ಮಟ್ಟದಲ್ಲಿ ನೋಂದಣಿ ಮತ್ತು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ. ಇನ್ನೂ ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಅನಿವಾರ್ಯವಾಗಿದ್ದು ಹಾಗಾಗಿ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಇದು ಅನಾನುಕೂಲವಾಗಿದೆ.
ತಿದ್ದುಪಡಿಗಾಗಿ ಪ್ರತಿಯೊಬ್ಬರಿಗೆ ಕೇವಲ 50 ರೂ.
ಶುಲ್ಕ ವಿಧಿಸಲಾಗುತ್ತದೆ. ಇನ್ನು ಐದು ವರ್ಷದೊಳಗಿನ ಮಕ್ಕಳ ಆಧಾರ್ ನೋಂದಣಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ತಿಳಿದುಬಂದಿದೆ.