Ad Widget .

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ….

Ad Widget . Ad Widget .

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕ್ 43,393 ಜನರಲ್ಲಿ ಪತ್ತೆಯಾಗಿದ್ದು ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿದೆ. ಇದಿರಿಂದ ಮತ್ತೆ ಲಾಕ್ ಡೌನ್ ಆಗುವ ಮುನ್ಸೂಚನೆ ಇದೆ.

Ad Widget . Ad Widget .

ಕಳೆದ 24 ಗಂಟೆಯಲ್ಲಿ 911 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದಲ್ಲದೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನಲೆ ಲಾಕ್ ಡೌನ್ ಮಾಡುವ ಸ್ಥಿತಿ ಎದುರಾಗಬಹುದು. ಅದರಿಂದ ಜನರು ಸೋಂಕಿನ ಬಗ್ಗೆ ಎಚ್ಚರ ವಹಿಸಿ ಅನಗತ್ಯ ಓಡಾಟ ಕ್ಕೆ ಬ್ರೇಕ್ ಹಾಕುವುದು ಅನಿವಾರ್ಯವಾಗಿದೆ. ಅಲ್ಲದೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅಲ್ಲದೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರಿಂದ ಸೋಂಕಿನ ನಿಯಂತ್ರಣದ ಜೊತೆಗೆ ಲಾಕ್ ಡೌನ್ ನನ್ನು ತಪ್ಪಿಸಬಹುದು.

ದೇಶದಲ್ಲಿ 4,58,727 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,98,88,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 44,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 17,90,708 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 42,70,16,605 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 36,48,47,549 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Leave a Comment

Your email address will not be published. Required fields are marked *