ಬೆಂಗಳೂರು ; ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿರುವ ರೈತರ 1 ಲಕ್ಷವರೆಗಿನ ಸಾಲಮನ್ನಾ ಮಾಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟ ರೈತರ 1 ಲಕ್ಷ ರೂ. ವರೆಗೆ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದಲ್ಲಿ ಎಷ್ಟು ರೈತರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಂಗ್ರಹಿಸಿ ಸಾಲಮನ್ನಾ ಮಾಡಲಾಗುವುದು ಈ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಮತ್ತು ಅಪೆಕ್ಸ್ ಬ್ಯಾಂಕ್ ಮೂಲಕ ಸಾಲಮನ್ನಾ ಯೋಜನೆ ಜಾರಿಗೆ ನಿರ್ಧರಿಸಲಾಗಿದ್ದು 1 ಲಕ್ಷ ರೂ. ಸಾಲ ಮನ್ನಾಕ್ಕೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.