ಮಂಗಳೂರು: ಅಪಘಾತ ಕಂಡು ಸಹಾಯಕ್ಕೆ ಧಾವಿಸಿದಾಗ ಬಂದೆರಗಿದ ಟ್ಯಾಂಕರ್ | ಸುಳ್ಯ ಮೂಲದ ಯುವಕ ಸಾವು

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಉಪಚರಿಸುತ್ತಿದ್ದ ವೇಳೆ ಯುವಕನೊಬ್ಬನಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆ ಇಂದು ನಡೆದಿದೆ.

Ad Widget ... ..

ಮೃತಪಟ್ಟವರನ್ನು ಸುಳ್ಯ ತಾಲೂಕಿನ ಮೇರ್ಕಜೆ ಪುರುಷೋತ್ತಮ ಎಂಬವರ ಮಗ ತೇಜಸ್ (28) ಎಂದು ಗುರುತಿಸಲಾಗಿದೆ.

Ad Widget

ನಗರದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದ ತೇಜಸ್ ನಿನ್ನೆ ಸಂಜೆ ಕೆಲಸ ಮುಗಿಸಿ ರೂಮ್ ಕಡೆ ತೆರಳುತ್ತಿದ್ದರು. ಈ ಸಂದರ್ಭ ನಗರದ ಬೈಕಂಪಾಡಿ ಬಳಿ ತೇಜಸ್ ಗೆ ಬೇರೊಂದು ಬೈಕ್ ಅಪಘಾತ ಗೊಂಡಿರುವುದು ಕಂಡುಬಂದಿದೆ. ತಕ್ಷಣ ಸಹಾಯಕ್ಕೆ ಧಾವಿಸಿದ ತೇಜಸ್ ಗಾಯಾಳುಗಳನ್ನು ಉಪಚರಿಸಿ, ರಸ್ತೆಯಲ್ಲಿ ಬಿದ್ದಿದ್ದ ಬೈಕನ್ನು ತಾವೇ ಕುಳಿತು ರಸ್ತೆಬದಿಗೆ ಕೊಂಡೊಯ್ಯುತ್ತಿದ್ದಾಗ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ನ ಒಂದು ಭಾಗ ತೇಜಸ್ ಗೆ ಸಿಕ್ಕಿಹಾಕಿಕೊಂಡಿದ್ದು ಸ್ವಲ್ಪ ದೂರ ಎಳೆದೊಯ್ದಿದೆ.

ಪರಿಣಾಮ ತೇಜಸ್ ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೇಜಸ್ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *