ಬೆಂಗಳೂರು: ಕಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸುಸಜ್ಜಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಮೊಬೈಲ್, ವಿದ್ಯುತ್, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಕಾರಣಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಆನ್ಲೈನ್ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣಕ್ಕಾಗಿ ಭಾರೀ ಕಷ್ಟಪಡುವಂತಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಚಿಂತಿಸಲಾಗಿದೆ.
ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಯವರಲ್ಲಿ ಸಂವಾದ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ವ್ಯವಸ್ಥೆ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಗ್ರಾಮೀಣ ಪ್ರದೇಶದ ಮಕ್ಕಳನ್ನು ಆನ್ಲೈನ್ ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹೇಳಿದ್ದಾರೆ.