ಬಾಲಕನ ಅಪಹರಣ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

ಉಡುಪಿ: ಬಾಲಕನ ಅಪಹರಣದ ಪ್ರಕರಣದಲ್ಲಿ ಬಂಧಿತ ಆರೋಪಿಯನ್ನು ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget ... ..

ಆರೋಪಿ ದಾಂಡೇಲಿಯ ಪರಶುರಾಮ‌ ಭೀಮಪ್ಪನನ್ನು ಭಾನುವಾರ ಕುಮಟಾದಲ್ಲಿ ಬಂಧಿಸಿದ್ದರು. ಸೋಮವಾರ ಉಡುಪಿಗೆ ಕರೆತರಲಾದ ಪರಶುರಾಮನನ್ನು ಮೂರ್ಚೆ ರೋಗದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ವೈದ್ಯರ ಸಲಹೆಯಂತೆ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

Ad Widget

ನ್ಯಾಯಾಂಗ ಬಂಧನಕ್ಕೆ ಒಳಗಾದ ಈತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈತನಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅದರಂತೆ ಆತನನ್ನು ಮತ್ತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *