Ad Widget .

ಕುಂದಾಪುರ: ಗಾಳಿ-ಮಳೆ |ಮನೆ ಮೇಲೆ ಮರ ಬಿದ್ದು ದಂಪತಿಗೆ ಗಾಯ

ಉಡುಪಿ: ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆಯೊಳಗಿದ್ದ ದಂಪತಿಗೆ ಗಂಭೀರ ಗಾಯವಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ.

Ad Widget . Ad Widget .

ಬಸ್ರೂರು ಮಕ್ಕಿಮನೆ ಗಣಪಯ್ಯ ಗಾಣಿಗರಿಗೆ ಸೇರಿದ ಮನೆ ಇದಾಗಿದ್ದು, ಗಣಪಯ್ಯ ಗಾಣಿಗ ಮತ್ತು ಪತ್ನಿ ವಾರಿಜ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಮತ್ತು ಬೃಹತ್ ಗಾತ್ರದ ಧೂಪದ ಮರ ಬಿದ್ದು ಮನೆ ಹಾನಿಯಾಗಿದೆ. ಮನೆಯಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯವಾಗದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಮನೆಯ ಗೋಡೆಗಳು ಕುಸಿದು ಬಿರುಕು ಬಿಟ್ಟಿದೆ. ಮೇಲ್ಛಾವಣಿ ಕುಸಿದಿದ್ದು ಸದ್ಯ ಆಸ್ಪತ್ರೆಯಲ್ಲಿ ದಂಪತಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ನದಿ ಮತ್ತು ಸಮುದ್ರ ತೀರದ ಜನ ಬಹಳ ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಅಪಾಯದಲ್ಲಿರುವ ಪ್ರದೇಶದ ಜನರು ಮುಂಜಾಗೃತಾ ಕ್ರಮವಾಗಿ ಎತ್ತರ ಪ್ರದೇಶಗಳಿಗೆ ತೆರಳಬೇಕು. ಆಶ್ರಯ ತಾಣಗಳಿಗೆ ಅಗತ್ಯಬಿದ್ದರೆ ತೆರಳಬೇಕು ಎಂದು ಡಿಸಿ ಸೂಚನೆ ನೀಡಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *